‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕೆ

Edited By:

Updated on: Jun 15, 2024 | 12:06 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಈ ಬೆನ್ನಲ್ಲೇ ದರ್ಶನ್ ಪರವಾಗಿ ಅನೇಕರು ಪೂಜೆ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಹೆಸರಲ್ಲಿ ಅವರ ಬಾವ ಪೂಜೆ ಸಲ್ಲಿಕೆ ಮಾಡಿದ್ದಾರೆ. ಕಾರವಾರದ ಕೈಗಾ ರಾಮಲಿಂಗೇಶ್ವರ ದೇಗುಲದಲ್ಲಿ ಪೂಜೆ ನಡೆದಿದೆ. ಆ ಬಳಿಕ ಅರ್ಚಕ ಶ್ರೀಪಾದ ಭಟ್ ಮಾತನಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಬಂಧನವಾಗಿದೆ. ಈ ಬೆನ್ನಲ್ಲೇ ದರ್ಶನ್ ಪರವಾಗಿ ಅನೇಕರು ಪೂಜೆ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಹೆಸರಲ್ಲಿ ಅವರ ಬಾವ ಪೂಜೆ ಸಲ್ಲಿಕೆ ಮಾಡಿದ್ದಾರೆ. ಕಾರವಾರದ ಕೈಗಾ ರಾಮಲಿಂಗೇಶ್ವರ ದೇಗುಲದಲ್ಲಿ ಪೂಜೆ ನಡೆದಿದೆ. ಆ ಬಳಿಕ ಅರ್ಚಕ ಶ್ರೀಪಾದ ಭಟ್ ಮಾತನಾಡಿದ್ದಾರೆ. ‘ಸದ್ಯ ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ. ಹಾಗಾಗಿ ದರ್ಶನ್​​​​​ ಹೆಸರಿನಲ್ಲಿ ಅವರ ಬಾವ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್​ ಹೆಸರಿನಲ್ಲಿ ಅರ್ಚನೆ ಹಾಗೂ ಅಭಿಷೇಕ ಮಾಡಿಸಲಾಗಿದೆ. ದರ್ಶನ್​ ಆದಷ್ಟು ಬೇಗ ಪ್ರಕರಣದಿಂದ ಹೊರಬರುವಂತೆ ಪೂಜೆ ಮಾಡಿಸಿದ್ದಾರೆ. ಮನುಷ್ಯನಿಗೆ ಜೀವತಾವಧಿಯಲ್ಲಿ ಶನಿ ಪಿಡೆ ಅನ್ನೋದು ಬರುತ್ತದೆ. ಈ ವೇಳೆ ದೋಷ ನಿವಾರಣೆ ಆಗಲಿ ಎಂದು ಶಿವನಿಗೆ ಪೂಜೆ ಸಲ್ಲಿಸಲಾಗುತ್ತದೆ’ ಎಂದಿದ್ದಾರೆ ಶ್ರೀಪಾದ್ ಭಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More