ಬರಪರಿಹಾರ ನಿಧಿ ಬಗ್ಗೆ ಗೃಹ ಸಚಿವರು ಹೇಳಿದ್ದನ್ನೇ ಸುಪ್ರೀಂ ಕೋರ್ಟ್​ನಲ್ಲಿ ಎಜಿ ಯಾಕೆ ಹೇಳಲಿಲ್ಲ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 24, 2024 | 1:55 PM

ಡಿಸೆಂಬರ್ 23 ರಂದು ಸಭೆ ಕರೆಯುತ್ತೇನೆಂದ ಗೃಹ ಸಚಿವರು ಯಾಕೆ ಕರೆಯಲಿಲ್ಲ? ನಾವು ಎನ್ ಡಿಆರ್ ಎಫ್ ನಿಂದ ಪರಿಹಾರ ಕೇಳುತ್ತಿದ್ದೇವೆ, ಅದರಲ್ಲಿ ನಮ್ಮ ಪಾಲು ಇಲ್ಲವೇ? ಈ ಕಾರಣಕ್ಕಾಗೇ ನಾವು ನಮ್ಮ ತೆರಿಗೆ ನಮ್ಮ ಹಕ್ಕು ಅಂತ ದೆಹಲಿಯಲ್ಲಿ ಪ್ರದರ್ಶನ ನಡೆಸಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಟಿವಿ9 ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಹಲವಾರು ಸಂಗತಿಗಳ ಬಗ್ಗೆ ಮುಕಗಿ ಮತ್ತು ನೇರವಾಗಿ ಮಾತಾಡಿದರು. ಬರ ಪರಿಹಾರ ನಿಧಿ (drought relief fund)ಬಿಡುಗಡೆ ವಿಳಂಬವಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಲ್ಲಿದ್ದ ಗೃಹ ಸಚಿವ ಅಮಿತ್ ಶಾ (Amit Shah) ಅವರೊಂದಿಗೆ ಟಿವಿ9 ಪ್ರತಿನಿಧಿ ಜೊತೆ ಮಾತಾಡಿದ್ದು ಸಚಿವರು ಹೇಳುವ ಪ್ರಕಾರ ಸಿದ್ದರಾಮಯ್ಯ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಉದ್ದೇಶಪೂರ್ವಕವಾಗಿ ಮೇಲಿಂದ ಮೇಲಿಂದ ಮನವಿ ಸಲ್ಲಿಸಿದ್ದನ್ನು ಬಿಟ್ಟರೆ ಬೇರೆ ಗಂಭೀರ ಪ್ರಯತ್ನ ಮಾಡಿಲ್ಲ. ಇದಕ್ಕೆ ಉಗ್ರರಾಗಿ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಿತ್ ಶಾ ಅವರು ಹೇಳಿದ್ದೇ ನಿಜವಾದರೆ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು, ಅಲ್ಲಿ ಕೇಂದ್ರ ಸರ್ಕಾರದ ಪರ ಮಾತಾಡಿದ ಅಟಾರ್ನಿ ಜನರಲ್ ಗೃಹ ಸಚಿವರು ಹೇಳಿದ ಮಾತುಗಳನ್ನು ಯಾಕೆ ಹೇಳಲಿಲ್ಲ? ಎಂದರು.

ಡಿಸೆಂಬರ್ 23 ರಂದು ಸಭೆ ಕರೆಯುತ್ತೇನೆಂದ ಗೃಹ ಸಚಿವರು ಯಾಕೆ ಕರೆಯಲಿಲ್ಲ? ನಾವು ಎನ್ ಡಿಆರ್ ಎಫ್ ನಿಂದ ಪರಿಹಾರ ಕೇಳುತ್ತಿದ್ದೇವೆ, ಅದರಲ್ಲಿ ನಮ್ಮ ಪಾಲು ಇಲ್ಲವೇ? ಈ ಕಾರಣಕ್ಕಾಗೇ ನಾವು ನಮ್ಮ ತೆರಿಗೆ ನಮ್ಮ ಹಕ್ಕು ಅಂತ ದೆಹಲಿಯಲ್ಲಿ ಪ್ರದರ್ಶನ ನಡೆಸಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಕಳೆದ ವರ್ಷದ ಬಜೆಟ್ ನಲ್ಲಿ ₹ 5,300 ಕೋಟಿ ಮೀಸಲಿರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದುವರೆಗೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ ಎಂದ ಸಿದ್ದರಾಮಯ್ಯ ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಕಿರುವದು ಕೇಂದ್ರ ಸರ್ಕಾರವಾದರೂ ಅದನ್ನು ನೀಡಲು ಯಾಕೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಅಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.