ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್​ರನ್ನು ಆಹ್ವಾನಿಸಿದ್ದೇಕೆ: ಮೌನಮುರಿದ ಸಿಎಂ ಸಿದ್ದರಾಮಯ್ಯ

Updated on: Aug 31, 2025 | 1:18 PM

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ರಾಜಕೀಯ ವಾಕ್ಸಮರ ನಡೆಯುತ್ತಿರುವ ಸಂದರ್ಭದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳಿದ್ದು ಏನು ಎಂಬುದು ಈ ವಿಡಿಯೋದಲ್ಲಿದೆ.

ಮೈಸೂರು, ಆಗಸ್ಟ್ 31: ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ನಾಡಹಬ್ಬ. ಹೀಗಾಗಿ, ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಯ್ಕೆ ಮಾಡಿದ್ದೇವೆ. ಈ ಹಿಂದೆ ಕವಿ ನಿಸಾರ್ ಅಹಮದ್ ಕೂಡ ಉದ್ಘಾಟನೆ ಮಾಡಿದ್ದರು ಎಂದರು. ಅಲ್ಲದೆ, ಬಾನು ಮುಷ್ತಾಕ್ ದನದ ಮಾಂಸ ತಿನ್ನುತ್ತಾರೆಂಬ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕೆಗೆ, ಹೀಗೆ ಹೇಳುವವರು ರೋಗಿಗಳು ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಮಾತಿನ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 31, 2025 01:18 PM