ಭೈರತಿ ರಣಗಲ್ ರಿಲೀಸ್ ಡೇಟ್ ಮುಂದಕ್ಕೆ ಯಾಕೆ? ಇಲ್ಲಿದೆ ವಿವರ
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಆ.15ರಂದು ತೆರೆಕಾಣಬೇಕಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿತ್ತು. ಇದಕ್ಕೆ ಗೀತಾ ವಿವರಣೆ ನೀಡಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ತಂಡ ಈ ಮೊದಲು ಟೀಸರ್ ರಿಲೀಸ್ ಮಾಡಿದಾಗ ಆಗಸ್ಟ್ನಲ್ಲಿ ಸಿನಿಮಾ ರಿಲೀಸ್ ಮಾಡೋ ಘೋಷಣೆ ಮಾಡಿತ್ತು. ಆದರೆ, ಈಗ ನವೆಂಬರ್ 15ರಂದು ಸಿನಿಮಾ ರಿಲೀಸ್ ಡೇಟ್ನ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಗೀತಾ ಶಿವರಾಜ್ಕುಮಾರ್ ಮಾತನಾಡಿದ್ದಾರೆ. ನಿರ್ಧಾರದ ಹಿಂದಿನ ಕಾರಣ ತಿಳಿಸಿದ್ದಾರೆ. ‘ಬೇರೆ ಬೇರೆ ಸಿನಿಮಾಗಳು ಬರ್ತಿದೆ. ಅವೆಲ್ಲ ಕನ್ನಡ ಸಿನಿಮಾಗಳು. ಹೀಗಾಗಿ ರಿಲೀಸ್ ಡೇಟ್ ಮುಂದಕ್ಕೆ ಹಾಕಿದ್ದೇವೆ. ಯಾರಿಗೂ ತೊಂದರೆ ಆಗಬಾರದು ಎಂದು ಶಿವರಾಜ್ಕುಮಾರ್ ಈ ನಿರ್ಧಾರ ಮಾಡಿದ್ದಾರೆ. ಮಕ್ಕಳ ದಿನಾಚರಣೆ ಸಮಯದಲ್ಲೇ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.