ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

Updated on: May 27, 2025 | 4:48 PM

ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿ ಪಕ್ಷ ಇಂದು ಗೇಟ್‌ಪಾಸ್ ಕೊಟ್ಟಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಬಿಜೆಪಿ ಹೈಕಮಾಂಡ್ ಏಕೆ ಈ ಇಬ್ಬರು ಶಾಸಕರನ್ನು ಅಮಾನತು ಮಾಡಿದೆ? ಇದಕ್ಕೆ ಅಸಲಿ ಕಾರಣಗಳು ಇಲ್ಲಿವೆ.

ಬೆಂಗಳೂರು, (ಮೇ 27): ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರಿಗೆ ಬಿಜೆಪಿ ಪಕ್ಷ ಇಂದು ಗೇಟ್‌ಪಾಸ್ ಕೊಟ್ಟಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮಹತ್ವದ ಆದೇಶ ಹೊರಡಿಸಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ನೋಟಿಸ್‌ಗೆ ಉತ್ತರ ನೀಡಿರುವುದನ್ನು ಒಪ್ಪದ ಶಿಸ್ತು ಸಮಿತಿ ಪದೇ ಪದೇ ಕಾಂಗ್ರೆಸ್ ಪಕ್ಷದ ಜೊತೆ ಹೊಂದಾಣಿಕೆ, ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ ಉಚ್ಛಾಟಿಸುವ ತೀರ್ಮಾನ ಕೈಗೊಂಡಿದೆ. ಈ ಮೂಲಕ ಗುಂಪುಗಾರಿಕೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇತರೆ ನಾಯಕರಿಗೂ ಹೈಕಮಾಂಡ್ ಸಂದೇಶ ರವಾನಿಸಿದೆ.ಇನ್ನು ಇವರಿಬ್ಬರನ್ನು ಅಮಾನತು ಮಾಡಲು ಅಸಲಿ ಕಾರಣಗಳೇನು ಎನ್ನುವ ವಿವರ ಇಲ್ಲಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More