ತೆಲಂಗಾಣಕ್ಕೆ ಸೂಟ್ಕೇಸ್ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ನಾಯಕರಲ್ಲಿ ಪೋಸ್ಟರ್ ಅಂಟಿಸುವ ಗೀಳು ಹುಟ್ಟಿಕೊಂಡಿದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಮ್ ಎಂಬ ಪೋಸ್ಟರ್ ಗಳನ್ನು ಅಂಟಿಸಿ ಪ್ರಚಾರ ನಡೆಸಿದರು. ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನ ಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸೂಟ್ ಕೇಸ್ ಗಳಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧವೂ ಪೊಸ್ಟರ್ ಗಳನ್ನು ಅಂಟಿಸಬೇಕು ತಾನೇ ಎಂದು ಕುಮಾರಸ್ವಾಮಿ ಕೇಳಿದರು.
ಬೆಂಗಳೂರು: ದೀಪಾವಳಿ ಹಬ್ಬದ (Diwali festivities) ಸಂದರ್ಭದಲ್ಲಿ ತಮ್ಮ ಮನೆಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲು ಅಚಾತುರ್ಯದಿಂದ ಮನೆ ಪಕ್ಕದ ಸಾರ್ವಜನಿಕ ವಿದ್ಯುತ್ ಕಂಬದಿಂದ ವಿದ್ಯುತ್ ಸಂಪರ್ಕ (power connection) ಪಡೆದ ಘಟನೆಗೆ ಸಂಬಂಧಿಸಿದಂತೆ ತಾವು ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಿದಾಗ್ಯೂ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರ ಅದನ್ನೊಂದು ದೊಡ್ಡ ಹಗರಣದಂತೆ ಬಿಂಬಿಸಿ ಜೆಡಿಎಸ್ ಕಚೇರಿ ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಿದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ಯತೀಂದ್ರ ಸಿದ್ದರಾಮಯ್ಯ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಆರೋಪಿತ ವರ್ಗಾವಣೆ ಧಂದೆಯ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಲ್ಲಿ ಪೋಸ್ಟರ್ ಅಂಟಿಸುವ ಗೀಳು ಹುಟ್ಟಿಕೊಂಡಿದೆ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಮ್ ಎಂಬ ಪೋಸ್ಟರ್ ಗಳನ್ನು ಅಂಟಿಸಿ ಪ್ರಚಾರ ನಡೆಸಿದರು. ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನ ಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸೂಟ್ ಕೇಸ್ ಗಳಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧವೂ ಪೊಸ್ಟರ್ ಗಳನ್ನು ಅಂಟಿಸಬೇಕು ತಾನೇ ಎಂದು ಕೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ