ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮೀಶನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ ದಾಖಲೆ ಅಲ್ಲವೇ? ಸಿದ್ದರಾಮಯ್ಯ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮೀಶನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ ದಾಖಲೆ ಅಲ್ಲವೇ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 13, 2023 | 4:52 PM

ಬಿಜೆಪಿ ಕಾರ್ಯಕರ್ತನಾಗಿದ್ದ ಸಂತೋಷ ಪಾಟೀಲ್ ಗ್ರಾಮೀಣಾಭಿವೃದ್ಧಿ ಇಲಾಖೆಗಾಗಿ ನಡೆಸಿದ ಕಾಮಗಾರಿಯ ಬಿಲ್ ಪಾಸ್ ಮಾಡಿಸಿಕೊಳ್ಳಲು 40 ಪರ್ಸೆಂಟ್ ಕಮೀಶನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ರಾಜ್ಯದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮೀಶನ್ ಸರ್ಕಾರ ಅಂತ ಹೇಳಿದರು. ಪ್ರಜಾಧ್ವನಿಯಾತ್ರೆ ಭಾಗವಾಗಿ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತಾಡಿದ ಅವರು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಿಲ್ ಪಾಸು ಮಾಡಲು ಮಂತ್ರಿಗಳು 40 ಪರ್ಸೆಂಟ್ ಕಮೀಶನ್ ಕೇಳುತ್ತಾರೆ ಅಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಪತ್ರ ಬರೆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದಾಖಲೆ ಕೊಡಿ ತನಿಖೆ ಮಾಡಿಸ್ತೀನಿ ಅನ್ನುತ್ತಾರೆ. ಪ್ರಧಾನಿಗಳಿಗೆ ಬರೆದ ಪತ್ರ ದಾಖಲೆಯಲ್ಲವೇ ಎಂದು ಸಿದ್ದರಾಮಯ್ಯ ಕೇಳಿದರು. ಬಿಜೆಪಿ ಕಾರ್ಯಕರ್ತನಾಗಿದ್ದ ಸಂತೋಷ ಪಾಟೀಲ್ ಗ್ರಾಮೀಣಾಭಿವೃದ್ಧಿ ಇಲಾಖೆಗಾಗಿ ನಡೆಸಿದ ಕಾಮಗಾರಿಯ ಬಿಲ್ ಪಾಸ್ ಮಾಡಿಸಿಕೊಳ್ಳಲು 40 ಪರ್ಸೆಂಟ್ ಕಮೀಶನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 13, 2023 04:52 PM