ಬಿಜೆಪಿಯವರು ಇದನ್ನ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್ ಸವಾಲ್
ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಸರ್ಕಾರ ಯಾರಿಗೂ ಕೊಟ್ಟಿಲ್ಲ. ಒಂದೇ ಒಂದು ಮನೆ ನೀಡಿರುವುದಾಗಿ ಹೇಳಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ.
ಮಂಡ್ಯ, ಜೂನ್ 30: 2017 ರಿಂದ 19ರಲ್ಲಿ ಮಂಜೂರಾತಿ ಆದ ಮನೆಗಳನ್ನು ಯಾರಿಗೂ ಕೊಟ್ಟಿಲ್ಲ. ಒಂದು ವೇಳೆ ಬಿಜೆಪಿ ಮನೆ ನೀಡಿರುವುದಾಗಿ ಹೇಳಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವಾಗ ಹಿಂದಿನ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಇರುವಾಗ ಸಲ್ಮಂ ಬೋರ್ಡ್ ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಗಿತ್ತು. ಅದೇ ರೀತಿಯಾಗಿ ರಾಜೀವ್ ಗಾಂಧಿ ಯೋಜನೆಯಲ್ಲಿ 53 ಸಾವಿರ ಮನೆಗಳು ಆ ಸಮಯದಲ್ಲೇ ಮಂಜೂರಾಗಿದ್ದವು. ಆದಾದ ಬಳಿಕ ಒಂದು ಮನೆಯನ್ನು ಸಹ ಮಂಜೂರು ಮಾಡಿಲ್ಲ. ಬಿಜೆಪಿ ಸರ್ಕಾರ ಒಂದು ಮನೆಯನ್ನು ಮಂಜೂರು ಮಾಡಿಲ್ಲ, ಒಂದು ಮನೆಯನ್ನು ಕೊಡುವುದಕ್ಕೆ ಸಾಧ್ಯವಾಗಿಲ್ಲ. ಒಂದು ವೇಳೆ ಅವರು ಮನೆ ನೀಡಿರುವುದಾಗಿ ಹೇಳಿದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.