Video: ನಂದಿನಿ ತುಪ್ಪದ ಬೆಲೆ ಏರಿಕೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಟ್ಟ ಸಮರ್ಥನೆ ಏನು?

Updated on: Nov 06, 2025 | 9:32 AM

ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದು ರೈತರಿಗೆ ಒಳ್ಳೆದಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ನವೆಂಬರ್ 06: ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದು ರೈತರಿಗೆ ಒಳ್ಳೆದಾಗಲಿದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂಬುದು ಅವರ ವಾದವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More