ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ

Updated on: Sep 27, 2024 | 10:48 AM

ಪುನೀತ್​ ರಾಜ್​ಕುಮಾರ್​ ಅವರ ಅಭಿಮಾನಿ ಆಗಿರುವ ಪ್ರಕಾಶ ಮತ್ತು ದೀಪಾ ದಂಪತಿ ಮನೆಯ ಎದುರು ದೇವಸ್ಥಾನ ಕಟ್ಟಿಸಿದ್ದಾರೆ. ಅಪ್ಪು ದೇವಸ್ಥಾನವನ್ನು ತಮ್ಮ ಸ್ವಂತ ಜಾಗದಲ್ಲಿ ಈ ಅಭಿಮಾನಿಗಳು ಕಟ್ಟಿದ್ದಾರೆ. ಈ ದಂಪತಿಯ ಮಗಳಿಗೆ ಅಪೇಕ್ಷಾ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಾಮಕರಣ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ ಅವರು ನಮ್ಮನ್ನು ಅಗಲಿ ಮೂರು ವರ್ಷ ಕಳೆಯುತ್ತಾ ಬಂದಿದೆ. ಅವರ ನೆನಪು ಅಷ್ಟು ಸುಲಭದಲ್ಲಿ ಮಾಸುವಂಥದ್ದಲ್ಲ. ರಸ್ತೆಗಳಿಗೆ, ಪಾರ್ಕ್​ಗಳಿಗೆ ಅವರ ಹೆಸರನ್ನು ಇಡಲಾಗಿದೆ. ಈಗ ಪುನೀತ್ ಅಭಿಮಾನಿಯೊಬ್ಬರು ಅಪ್ಪುಗಾಗಿ ದೇವಸ್ಥಾನ ನಿರ್ಮಿಸಿದ್ದಾರೆ. ಅಪ್ಪು ದೇವಸ್ಥಾನವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಸಿದ್ದಾರೆ. ಪುನೀತ್ ಮೂರ್ತಿಯನ್ನು ನೋಡಿ ಅಶ್ವಿನಿ ಭಾವುಕರಾಗಿದ್ದಾರೆ. ಈ ಬಗ್ಗೆ ದೇವಸ್ಥಾನ ನಿರ್ಮಿಸಿದವರು ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More