ಕೊಲೆ ಕೇಸ್​ನಲ್ಲೂ ದರ್ಶನ್​ಗೆ ಫ್ಯಾನ್ಸ್​ ಬೆಂಬಲ ನೀಡೋದು ಯಾಕೆ? ಉತ್ತರಿಸಿದ ಉಮಾಶ್ರೀ

Updated on: Jun 12, 2024 | 8:42 PM

ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರು ದರ್ಶನ್​ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕೊಲೆ ಆರೋಪ ಇದ್ದರೂ ಕೂಡ ಅನೇಕರು ದರ್ಶನ್​ಗೆ ಬೆಂಬಲ ನೀಡುತ್ತಿದ್ದಾರೆ. ಅಂಥ ಮನಸ್ಥಿತಿ ಯಾಕೆ ಎಂಬ ಪ್ರಶ್ನೆಗೆ ಉಮಾಶ್ರೀ ಉತ್ತರಿಸಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ ಸೇರಿ ಒಟ್ಟು 17 ಜನರ ಮೇಲೆ ಕೇಸ್​ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ಕೊಲೆ ಆರೋಪದಲ್ಲಿ ನಟ ದರ್ಶನ್​ (Darshan) ಅರೆಸ್ಟ್​ ಆಗಿದ್ದು ಅನೇಕರಿಗೆ ಅಚ್ಚರಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬುವವರ ಹತ್ಯೆಯಲ್ಲಿ ದರ್ಶನ್​ ಮತ್ತು ಸಹಚರರ ಕೈವಾಡ ಇದೆ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ದರ್ಶನ್​ ಮೇಲೆ ಇಂಥ ಗಂಭೀರ ಆರೋಪ ಕೇಳಿಬಂದಿದ್ದರೂ ಕೂಡ ಅನೇಕ ಅಭಿಮಾನಿಗಳು ನಟನಿಗೆ ಬೆಂಬಲ ಸೂಚಿಸುತ್ತಿದ್ದಾರೆ. ದರ್ಶನ್​ ಪರವಾಗಿ ಕೆಲವು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ. ಅಂಥವರ ಮನಸ್ಥಿತಿ ಬಗ್ಗೆ ನಟಿ ಉಮಾಶ್ರೀ (Umashree) ಮಾತನಾಡಿದ್ದಾರೆ. ‘ಎಲ್ಲರಿಗೂ ಒಂದು ನಂಬಿಕೆ ಎನ್ನುವುದು ಇರುತ್ತದೆ. ನಾವು ಆರಾಧಿಸುವ, ಪೂಜಿಸುವ ವ್ಯಕ್ತಿಗಳ ಬಗ್ಗೆ ಆ ನಂಬಿಕೆ ಯಾವಾಗಲೂ ಇರುತ್ತೆ. ಜೊತೆಯಲ್ಲಿ ಕೆಲಸ ಮಾಡಿದ ನಮಗೂ ಹಾಗೆ ಅನಿಸುತ್ತದೆ. ನಾನು ಕೂಡ ಈಗ ಹಾಗೇ ಹೇಳಿದೆ. ತುಂಬ ಒಳ್ಳೆಯ ಹುಡುಗ, ಯಾಕೆ ಹೀಗೆ ಆಯ್ತೋ ಗೊತ್ತಿಲ್ಲ ಅಂತ. ಆ ನಂಬಿಕೆಯಿಂದಲೇ ಎಲ್ಲರೂ ಆ ರೀತಿ ಪ್ರತಿಕ್ರಿಯೆ ನೀಡುತ್ತಾರೆ. ಅದು ತಪ್ಪು ಅಂತ ನಾವಾಗಲೀ, ನೀವಾಗಲೀ ಹೇಳೋಕೆ ಆಗಲ್ಲ’ ಎಂದಿದ್ದಾರೆ ಉಮಾಶ್ರೀ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More