AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7.5 ಲಕ್ಷ ಕೋಟಿ ರೂ.ಆಸ್ತಿ ಒಡೆಯ ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

7.5 ಲಕ್ಷ ಕೋಟಿ ರೂ.ಆಸ್ತಿ ಒಡೆಯ ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ರಮೇಶ್ ಬಿ. ಜವಳಗೇರಾ
|

Updated on:Aug 23, 2026 | 4:07 PM

Share

7.5 ಲಕ್ಷ ಕೋಟಿ ರೂ.ಆಸ್ತಿಯ ಮೌಲ್ಯದ ಒಡೆಯ, ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ(Gautam Adani) ಅವರು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿ ಮಾಡಿದ್ದಾರೆ. ಗೌತಮ್ ಅದಾನಿಯವೇ ಖುದ್ದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ತೆರಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, (ಆಗಸ್ಟ್​ 23): 7.5 ಲಕ್ಷ ಕೋಟಿ ರೂ.ಆಸ್ತಿಯ ಮೌಲ್ಯದ ಒಡೆಯ, ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ(Gautam Adani) ಅವರು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿ ಮಾಡಿದ್ದಾರೆ. ಗೌತಮ್ ಅದಾನಿಯವೇ ಖುದ್ದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ತೆರಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ದೇಶದ ಸಿರಿವಂತ ಉದ್ಯಮಿಯಲ್ಲಿ ಗೌತಮ್ ಅದಾನಿ ಸಹ ಒಬ್ಬರು ಅಂತವರೇ ಸಿಎಂ ಭೇಟಿ ಮಾಡಿದ್ದ ಸಹಜವಾಗಿಯೇ ಅಚ್ಚರಿ ಮತ್ತು ಕುತೂಹಲ. ಈ ಭೇಟಿ ಬಗ್ಗೆ ಬೇರೆ ಬೇರೆ ರೀತಿಯ ಚರ್ಚೆಗಳು ಶುರುವಾಗಿವೆ. ಅಸಲಿಗೆ ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಭೇಟಿ ಮಾಡಿ ಮಾಡಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಸಂಚಾರ(Bengaluru Traffic) ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ(Tunnel Road) ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸರ್ಕಾರ ಅಂದಾಜು 17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ (Lowest Bidder) ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ. ಇದೆ ವಿಚಾರಕ್ಕೆ ಇಬ್ಬರು ನಾಯಕರು ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ ಯೋಜನೆ; ಅದಾನಿ ಗ್ರೂಪ್ ಎಲ್1 ಆಗಿ ಆಯ್ಕೆ; ಕುತೂಹಲ ಮೂಡಿಸಿದ ಅದಾನಿ-ಸಿಎಂ ಭೇಟಿ

Published on: Aug 23, 2026 04:03 PM

Follow Us