ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್

Updated on: Jul 06, 2024 | 8:28 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದು, ಅವರ ವೃತ್ತಿ ಬದುಕಿಗೆ ಕಪ್ಪು ಚುಕ್ಕಿ ಆಗಿದೆ. ಅವರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗುತ್ತಿದೆ. ಈ ಮಧ್ಯೆ ದರ್ಶನ್ ಮನೆಯಲ್ಲಿ ಸಿಕ್ಕ ಹಣದ ವಿಚಾರಕ್ಕೆ ಉಪ ಮೇಯರ್ ಮೋಹನ್ ರಾಜ್ ಮಾತನಾಡಿದ್ದಾರೆ.

ನಟ ದರ್ಶನ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ ಆಗಿತ್ತು. ಇದರ ಮೂಲ ಬೆನ್ನತ್ತಿ ಹೋದ ಪೊಲೀಸರಿಗೆ ಸಿಕ್ಕಿದ್ದು ಮಾಜಿ ಉಪ ಮೇಯರ್ ಮೋಹನ್ ರಾಜ್ ಹೆಸರು. ಅವರೇ ದರ್ಶನ್​ಗೆ ಈ ಹಣ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ನೋಟಿಸ್ ನೀಡಲಾಗಿತ್ತು. ಬಸವೇಶ್ವರ ನಗರ ಪೋಲೀಸ್ ಠಾಣೆಗೆ ಆಗಮಿಸಿದ ಮೋಹನ್ ರಾಜ್ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಆ ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ‘12 ಗಂಟೆಗೆ ನೋಟಿಸ್ ಬಂದಿತ್ತು. ಮೂರು ಗಂಟೆಗೆ ಬರಬೇಕು ಎಂದಿತ್ತು. ನಾನು ಬಂದೆ. ಅವರು ಕೇಳಿದ ಎಲ್ಲಾ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರ ಕೊಟ್ಟಿದ್ದೇನೆ. ಎಲ್ಲವೂ ಕ್ಯಾಶ್ ವಿಚಾರಕ್ಕೆ ಸಂಬಂಧಿಸಿದ್ದು. ವೈಯಕ್ತಿಕ ವಿಚಾರಕ್ಕೆ ದರ್ಶನ್ ಅವರಿಂದ ಹಣ ಪಡೆದಿದಿದ್ದೆ. ಅದನ್ನು ವಾಪಸ್ ಕೊಟ್ಟಿದ್ದೇನೆ. ತನಿಖೆ ಹಂತದಲ್ಲಿ ಇರೋದ್ರಿಂದ ಹೆಚ್ಚು ವಿವರಿಸೋಕೆ ಸಾಧ್ಯವಿಲ್ಲ’ ಎಂದಿದ್ದಾರೆ ಮೋಹನ್ ರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More