ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ?

Edited By:

Updated on: Sep 04, 2026 | 10:34 PM

ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರದಿಂದ ಜರುಗಿದೆ. ಬಂಡೀಪುರ ಅಭಯಾರಣ್ಯದಲ್ಲಿರುವ ಈ ದೇವಾಲಯ, ಸದಾ ಮಂಜಿನಿಂದ ಕೂಡಿರುವ ಕಾರಣಕ್ಕೆ "ದಕ್ಷಿಣ ಗೋವರ್ಧನಗಿರಿ" ಎಂದೂ ಪ್ರಸಿದ್ಧವಾಗಿದೆ. ಖಾಸಗಿ ವಾಹನಗಳಿಗೆ ಪ್ರವೇಶವಿಲ್ಲದೆ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಭಕ್ತರು ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತಾರೆ.

ಚಾಮರಾಜನಗರ, ಸೆಪ್ಟೆಂಬರ್​ 04: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಸುಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ದಟ್ಟ ಕಾನನದ ನಡುವೆ ಸಮುದ್ರ ಮಟ್ಟದಿಂದ 1450 ಮೀಟರ್ ಎತ್ತರದಲ್ಲಿ ನೆಲೆಸಿರುವ ಈ ದೇವಾಲಯವು, ವರ್ಷಪೂರ್ತಿ ಮಂಜಿನಿಂದ ಆವೃತವಾಗಿರುತ್ತದೆ. ಇದೇ ಕಾರಣಕ್ಕೆ ಇದನ್ನು ಹಿಮವದ್ ಗೋಪಾಲಸ್ವಾಮಿ ಬೆಟ್ಟ ಎಂದು ಕರೆಯಲಾಗುತ್ತದೆ. ದಕ್ಷಿಣ ಗೋವರ್ಧನಗಿರಿ ಎಂದೂ ಖ್ಯಾತವಾಗಿರುವ ಈ ದೇವಾಲಯವು ಚೋಳರ ಕಾಲದಲ್ಲಿ ನಿರ್ಮಾಣಗೊಂಡು, ನಂತರ ಹೊಯ್ಸಳರು ಮತ್ತು ಮೈಸೂರು ಒಡೆಯರ್​​ರಿಂದ ಪುನರುತ್ಥಾನಗೊಂಡಿದೆ. ಈ ಪ್ರದೇಶವು ವನ್ಯಜೀವಿ ಸಂರಕ್ಷಿತ ವಲಯದಲ್ಲಿರುವುದರಿಂದ, ಭಕ್ತರು ಮತ್ತು ಪ್ರವಾಸಿಗರಿಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿಲ್ಲ. ಬೆಟ್ಟದ ತಪ್ಪಲಿನಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಿ, ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಬೆಟ್ಟವನ್ನು ಏರಬೇಕಾಗುತ್ತದೆ. ಬೆಳಗ್ಗೆ 8:30 ರಿಂದ ಸಂಜೆ 4:00 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾವಿರಾರು ಭಕ್ತರು ಶ್ರೀಕೃಷ್ಣನ ದರ್ಶನ ಪಡೆದು ಪುನೀತರಾದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More