ನವೆಂಬರ್ ಕ್ರಾಂತಿ ಚರ್ಚೆ ನಡುವೆ ಮೋದಿ ಭೇಟಿ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

Updated on: Nov 17, 2025 | 6:37 PM

ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್​​ನಲ್ಲಿ ನವೆಂಬರ್​​ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.

ನವದೆಹಲಿ, (ನವೆಂಬರ್ 17): ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್​​ನಲ್ಲಿ ನವೆಂಬರ್​​ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.

Published on: Nov 17, 2025 06:37 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More