ನ್ಯಾಷನಲ್ ಹೆರಾಲ್ಡ್ ಕೇಸ್​​ನಲ್ಲಿ ಡಿಕೆ ಶಿವಕುಮಾರ್​ಗೆ ಏಕೆ ನೋಟಿಸ್? ಡಿಸಿಎಂ ಹೇಳಿದ್ದೇನು ನೋಡಿ

Updated on: Dec 06, 2025 | 11:10 AM

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ನಮ್ಮ ಪಕ್ಷದ ಸಂಸ್ಥೆಗಳು. ಕಷ್ಟದ ಸಮಯದಲ್ಲಿ ನಮ್ಮ ಟ್ರಸ್ಟ್‌ಗಳ ಮೂಲಕ ಸಹಾಯ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಡಿ ನೋಟಿಸ್‌ಗೆ ಈಗಾಗಲೇ ಉತ್ತರಿಸಲಾಗಿದೆ, ಚಾರ್ಜ್‌ಶೀಟ್ ಸಹ ಆಗಿದೆ. ದೆಹಲಿ ಪೊಲೀಸರ ಮಾಹಿತಿ ಕೋರಿಕೆಯನ್ನು ಕಿರುಕುಳ ಎಂದು ಅವರು ಖಂಡಿಸಿದ್ದಾರೆ.

ಬೆಂಗಳೂರು, ಡಿಸೆಂಬರ್ 6: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪಕ್ಷದ ಸಂಕಷ್ಟದ ಸಮಯದಲ್ಲಿ, ನಮ್ಮಂತಹ ಕಾಂಗ್ರೆಸ್ಸಿಗರು ಟ್ರಸ್ಟ್‌ಗಳ ಮೂಲಕ ಆ ಸಂಸ್ಥೆಗಳಿಗೆ ಸಹಾಯ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ತಮಗೆ ಇಡಿ ನೋಟಿಸ್ ಬಂದ ಕೂಡಲೇ ಅಗತ್ಯವಿರುವ ಎಲ್ಲ ಮಾಹಿತಿ ಹಾಗೂ ಉತ್ತರಗಳನ್ನು ಈಗಾಗಲೇ ನೀಡಲಾಗಿದೆ. ಚಾರ್ಜ್‌ಶೀಟ್ ಕೂಡ ಸಲ್ಲಿಕೆಯಾಗಿದೆ. ಇದೀಗ ದೆಹಲಿ ಪೊಲೀಸರು ಈ ತಿಂಗಳ 19 ರೊಳಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇದನ್ನು ಕಾನೂನಾತ್ಮಕವಾಗಿ ಪರಿಶೀಲಿಸುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಒಟ್ಟಾರೆ ಈ ಬೆಳವಣಿಗೆಯನ್ನು ಕಿರುಕುಳ ನೀಡುವ ಯತ್ನ ಎಂದು ಬಣ್ಣಿಸಿರುವ ಅವರು, ಇದು ಸರಿಯಲ್ಲ ಎಂದು ಖಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ