ಸುದೀಪ್ ಮತ್ತೆ ಬಿಗ್ ಬಾಸ್​ಗೆ ಬರ್ತಾರಾ? ಅಳಿಯ ಸಂಚಿತ್ ಹೇಳಿದ್ದಿಷ್ಟು

Edited By:

Updated on: Feb 05, 2025 | 8:24 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡೋದಿಲ್ಲ ಎನ್ನುವ ಮಾತಿದೆ. ಆದರೆ, ವಾಹಿನಿಯವರು ಇದನ್ನು ಒಪ್ಪಿಲ್ಲ. ಈ ಬಗ್ಗೆ ಸುದೀಪ್ ಅಳಿಯ ಸಂಚಿತ್ ಸಂಜೀವ್ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಗೆ ಬರುವ ಸೂಚನೆ ಸಿಕ್ಕಿದೆ.

‘ಬಿಗ್ ಬಾಸ್ ಕನ್ನಡ’ ನಿರೂಪಣೆಗೆ ಸುದೀಪ್ ಗುಡ್​ಬೈ ಹೇಳಿಯಾಗಿದೆ. ಟ್ವಿಟರ್ ಮೂಲಕ ಇದನ್ನು ಅಧಿಕೃತ ಮಾಡಿದ್ದಾರೆ. ಈಗ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಮಾತನಾಡಿದ್ದು, ಈ ಬಗ್ಗೆ ವಿವರಣೆ ನೀಡಿದ್ದಾರೆ. ‘ಜಗತ್ತಿನಲ್ಲಿ ಎಲ್ಲೇ ಇದ್ದರು ಶುಕ್ರವಾರ ಬರಲೇಬೇಕು. ಅದು ದೊಡ್ಡ ಕಮಿಟ್​ಮೆಂಟ್. ಅಲ್ಲಿ ನಡೆದಿರುವ ಜಗಳವನ್ನು ಸರಿಪಡಿಸಬೇಕು. ಮೆಂಟಲ್​ ಸ್ಟ್ರೆಂತ್​ ಬೇಕು. ಇದು ಅವರ ನಿರ್ಧಾರ, ನಾವು ಅದನ್ನು ಗೌರವಿಸಬೇಕು’ ಎಂದಿದ್ದಾರೆ ಸಂಚಿತ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 05, 2025 08:23 PM
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More