ಮಹದೇವಪುರ ಮಾತ್ರ ಯಾಕೆ? ಶಿವಾಜಿನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳ ಮೇಲೂ ಚರ್ಚೆಯಾಗಲಿ: ವಿಜಯೇಂದ್ರ
ಮಹದೇವಪುರ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆಯೆಂದು ಹೇಳುವ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರು ಹೆಚ್ಚಿರುವ ಶಿವಾಜಿನಗರ ಮತ್ತು ಚಾಮರಾಜಪೇಟೆಯ ವೋಟರ್ ಲಿಸ್ಟ್ ಅನ್ನು ಯಾಕೆ ಪರಿಶೀಲನೆ ಮಾಡಲ್ಲ? ಲೋಕಸಭೆಯಲ್ಲಿ ಮಾತಾಡುವ ಯೋಗ್ಯತೆ ಮತ್ತು ಸಾಮರ್ಥ್ಯ ರಾಹುಲ್ ಗಾಂಧಿಯವರಲ್ಲಿ ಇಲ್ಲ, ಹಲವಾರು ಜ್ವಲಂತ ಸಮಸ್ಯೆಗಳಿವೆ, ಅವುಗಳನ್ನು ಚರ್ಚೆ ಮಾಡುವ ಬದಲು ಚುನಾವಣಾ ಆಯೋಗದ ಮೇಲೆ ಅರೋಪ ಹೊರಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರು, ಆಗಸ್ಟ್ 8: ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ (Lok Sabha Polls) ಅನುಭವಿಸಿದ ಸೋಲಿನ ಹತಾಷೆಯಲ್ಲಿದ್ದಾರೆ, ಹಾಗಾಗೇ ಅವರು ಮತಗಳ್ಳತನದ ಆರೋಪಗಳನ್ನು ಮಾಡುತ್ತಿದ್ದಾರೆ, ಇದು ಅವರು ಮತದಾರರಿಗೆ ಮಾಡುವ ಅಪಮಾನವಲ್ಲದೆ ಮತ್ತೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಮಹದೇವಪುರ ಮತಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆಯೆಂದು ಹೇಳುವ ರಾಹುಲ್ ಗಾಂಧಿ ಬಿಹಾರದಲ್ಲಿ ನಡೆಯುತ್ತಿರುವ ಸ್ಪೆಷಲ್ ಇಂಟೆನ್ಸಿವ್ ರಿವಿಜನ್ ಅನ್ನು ಯಾಕೆ ವಿರೋಧಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳುತ್ತಾರೆ. ಮತಗಳ್ಳತನ ನಡೆದಿದೆ ಇವರು ಮಾಡುತ್ತಿರುವ ಅರೋಪಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕಂತೆ, ಕಾಂಗ್ರೆಸ್ ಒಂದು ಮೂರ್ಖರ ಪಕ್ಷವಾಗಿದೆ ಎಂದು ವಿಜಯೇಂದ್ರ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಲು ಶಿವಕುಮಾರ್ಗೆ ತಾಕೀತು ಮಾಡಿದ ವಿಜಯೇಂದ್ರ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

