AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯಾದ್ರೆ ಪರವಾಗಿಲ್ವಾ? ಹಾಲಿನ ಬೆಲೆ ಹೆಚ್ಚಿಸಿದ್ರೆ ವಿರೋಧವೇಕೆ; ಕೃಷ್ಣಬೈರೇಗೌಡ ಪ್ರಶ್ನೆ

ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯಾದ್ರೆ ಪರವಾಗಿಲ್ವಾ? ಹಾಲಿನ ಬೆಲೆ ಹೆಚ್ಚಿಸಿದ್ರೆ ವಿರೋಧವೇಕೆ; ಕೃಷ್ಣಬೈರೇಗೌಡ ಪ್ರಶ್ನೆ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 29, 2026 | 10:55 PM

Share

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂಪಾಯಿ ಏರಿಕೆಯಾಗಿದೆ. ಇದರಲ್ಲಿ 7 ರೂ. ಹಾಲು ಉತ್ಪಾದಕರಿಗೆ ಮತ್ತು 1 ರೂಪಾಯಿ ಕೆಎಂಎಫ್‌ಗೆ ಸಿಗಲಿದೆ. ಡೀಸೆಲ್, ಪೆಟ್ರೋಲ್, ಪ್ಲಾಸ್ಟಿಕ್ ಪ್ಯಾಕಿಂಗ್ ಮತ್ತು ಸಾರಿಗೆ ವೆಚ್ಚಗಳು ಹೆಚ್ಚಳವಾಗಿರುವ ಕಾರಣ ಒಕ್ಕೂಟಗಳು ದರ ಏರಿಕೆಗೆ ಮನವಿ ಮಾಡಿದ್ದವು. ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಬೆಂಗಳೂರು, ಅಕ್ಟೋಬರ್​​ 29: ‘ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಹೆಚ್ಚಾದಾಗ, ನಾವು ಅದಕ್ಕೆ ಹೊಂದಿಕೊಳ್ಳುತ್ತೇವೆ. ಕುಡಿಯುವ ನೀರಿಗೂ ಬಾಟಲಿಗೆ ಹೆಚ್ಚು ಹಣ ನೀಡುತ್ತೇವೆ. ಆದರೆ, ರೈತರು ಕಷ್ಟಪಟ್ಟು ಉತ್ಪಾದಿಸುವ ಹಾಲಿಗೆ ಬೆಲೆ ಹೆಚ್ಚಳ ಮಾಡುವಾಗ ಜನ ವಿರೋಧಿಸುತ್ತಾರೆ’ ಎಂದು ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದರು. ನಂದಿನ ಹಾಲಿನ ದರ ಹೆಚ್ಚಳ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಡೀಸೆಲ್, ಪೆಟ್ರೋಲ್, ಪ್ಲಾಸ್ಟಿಕ್ ಪ್ಯಾಕಿಂಗ್ ಹಾಗೂ ಸಾರಿಗೆ ವೆಚ್ಚಗಳ ಹೆಚ್ಚಳವನ್ನು ಗಣನೆಗೆ ತೆಗೆದುಕೊಂಡು, ಕೆಎಂಎಫ್‌ಗೆ ಕೇವಲ ಒಂದು ರೂ ಮತ್ತು ರೈತರಿಗೆ 7 ರೂ ಹೆಚ್ಚುವರಿ ಹಣ ನೀಡಲು ನಿರ್ಧರಿಸಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆಯಬೇಕಾಗಿದೆ. ಕರ್ನಾಟಕ ಸರ್ಕಾರ ರೈತರ ಪರವಾಗಿದ್ದು, ಈ ನಿರ್ಧಾರ ಅವರ ಹಿತದೃಷ್ಟಿಯಿಂದಲೇ ತೆಗೆದುಕೊಳ್ಳಲಾಗಿದೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More