ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ

Updated on: Jul 11, 2025 | 12:32 PM

ಯಶ್ ಹಾಗೂ ತಾಯಿ ಪುಷ್ಪಾ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಇವೆ. ಆದರೆ, ಇದನ್ನು ಅವರು ಒಪ್ಪೋದಿಲ್ಲ. ಅವರು ಯಶ್ ಬಗ್ಗೆ ಮೆಚ್ಚುಗೆಯ ಮಾತನ್ನು ಆಡುತ್ತಿದ್ದಾರೆ. ಯಶ್ ಜೊತೆ ಅಷ್ಟು ಒರಟಾಗಿ ನಡೆದುಕೊಳ್ಳೋದು ಏಕೆ ಎಂದು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.  

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದು ಅವರ ನಿರ್ಮಾಣದ ಮೊದಲ ಸಿನಿಮಾ. ಈ ಚಿತ್ರದ ಬಗ್ಗೆ ಸಾಕಷ್ಟು ಸಂದರ್ಶನಗಳನ್ನು ಅವರು ನೀಡುತ್ತಿದ್ದಾರೆ. ಯಶ್ (Yash) ವಿಚಾರದಲ್ಲಿ ಅವರು ರಫ್ ಆ್ಯಂಡ್ ಟಫ್ ಆಗಿ ಮಾತನಾಡುತ್ತಿದ್ದಾರೆ. ಹೀಗೇಕೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಯಶ್​ನ ಅವರು ಪ್ಯಾಂಪರ್ ಮಾಡಿ ಬೆಳೆಸಿಲ್ಲವಂತೆ. ಮನೆಯಲ್ಲೂ ಯಶ್ ಹಾಗೂ ಪುಷ್ಪಾ ಇದೇ ರೀತಿ ಇರುತ್ತಾರಂತೆ. ಆ ಬಗ್ಗೆ ವಿಡಿಯೋದಲ್ಲಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 11, 2025 12:30 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More