Shanvi Srivastava: ಮಾತೃಭಾಷೆ ಹಿಂದಿಯಾದರೂ ಕರುನಾಡಿನ ಮೇಲಿನ ಪ್ರೀತಿಗೆ ಕನ್ನಡ ಕಲಿತ ಶಾನ್ವಿ ಶ್ರೀವಾಸ್ತವ

Updated on: Sep 15, 2023 | 5:59 PM

‘ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023’ ಕಾರ್ಯಕ್ರಮದಲ್ಲಿ ಶಾನ್ವಿ ಶ್ರೀವಾಸ್ತವ ಭಾಗಿ ಆಗಿದ್ದಾರೆ. ರಾಜ್​ ಬಿ. ಶೆಟ್ಟಿ ಜೊತೆ ಅವರು ವೇದಿಕೆ ಹಂಚಿಕೊಂಡಿದ್ದಾರೆ. ಈ ವೇಳೆ ಅವರು ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ತಾವು ಕನ್ನಡ ಕಲಿತಿದ್ದು ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ.

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ (Shanvi Srivastava) ಅವರು ಉತ್ತರ ಭಾರತದವರು. ಅವರು ವೃತ್ತಿಬದುಕು ಕಟ್ಟಿಕೊಂಡಿದ್ದು ಕರ್ನಾಟಕದಲ್ಲಿ. ಕನ್ನಡ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಕರುನಾಡಿನಿಂದ ಅವರಿಗೆ ಹಣ, ಹೆಸರು ಎಲ್ಲವೂ ಸಿಕ್ಕಿದೆ. ಆ ಪ್ರೀತಿಗಾಗಿ ಅವರು ಕನ್ನಡ ಕಲಿತಿದ್ದಾರೆ. ‘ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023’ (TV9 Karnataka Summit 2023) ಕಾರ್ಯಕ್ರಮದಲ್ಲಿ ಶಾನ್ವಿ ಶ್ರೀವಾಸ್ತವ ಭಾಗಿ ಆಗಿದ್ದಾರೆ. ರಾಜ್​ ಬಿ. ಶೆಟ್ಟಿ (Raj B. Shetty) ಜೊತೆ ಅವರು ವೇದಿಕೆ ಹಂಚಿಕೊಂಡಿದ್ದಾರೆ. ಈ ವೇಳೆ ಅವರು ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ತಾವು ಕನ್ನಡ ಕಲಿತಿದ್ದು ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ. ರಕ್ಷಿತ್​ ಶೆಟ್ಟಿ, ಯಶ್​, ಗಣೇಶ್​, ದರ್ಶನ್​ ಮುಂತಾದ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More