ಉಪೇಂದ್ರ ಚುನಾವಣೆಯಲ್ಲಿ ಏಕೆ ಸ್ಪರ್ಧಿಸಲ್ಲ? ಉತ್ತರಿಸಿದ ನಟ

Edited By:

Updated on: May 09, 2026 | 11:41 AM

ನಟ ಉಪೇಂದ್ರ ಅವರು ಪ್ರಜಾಕೀಯ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ಅವರು ಈವರೆಗೆ ಚುನಾವಣೆಗೆ ನಿಂತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಅವರ ಲಾಜಿಕ್ ಅನ್ನು ಅನೇಕರು ಒಪ್ಪಿದ್ದಾರೆ. ಉಪೇಂದ್ರ ಅವರ ಚುನಾವಣೆಗೆ ಏಕೆ ನಿಲ್ಲುವುದಿಲ್ಲ ಎಂಬುದನ್ನು ವಿವರವಾಗಿ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ನಟ ಉಪೇಂದ್ರ ಅವರು ಪ್ರಜಾಕೀಯ ಸ್ಥಾಪಿಸಿದ್ದಾರೆ. ಆದರೆ, ಅವರು ಚುನಾವಣೆಗೆ ನಿಲ್ಲಲ್ಲ. ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಫಾಲೋವರ್​ ಅಲ್ಲ. ಯಾರೋ ಆ್ಯಕ್ಷನ್ ಸಿನಿಮಾ ಮಾಡಿ ಹಿಟ್ ಆದರೆ, ನಾನು ಆ್ಯಕ್ಷನ್ ಸಿನಿಮಾ ಮಾಡಲ್ಲ. ನಾನು ಮೊದಲಿನಿಂದ ಅದನ್ನೇ ಫಾಲೋ ಮಾಡುತ್ತಾ ಬರುತ್ತಿದ್ದೇನೆ. ನಾನು ಆರ್ಟಿಸ್ಟ್ ಎಂದು ಮತ ಹಾಕಬೇಡಿ, ಸ್ಪರ್ಧಿ ಎಂದು ಪರಿಗಣಿಸಿ ವೋಟ್ ಹಾಕಿ. ನಾನು ಚುನಾವಣೆಗೆ ನಿಲ್ಲಲ್ಲ ಎಂದಿದ್ದು ಇದೇ ಕಾರಣಕ್ಕೆ.ನಾನು ನಿಲ್ಲಲ್ಲ, ಬೇರೆಯವರು ನಿಲ್ಲುತ್ತಾರೆ ಎಂದಾಗ ವಿಚಾರಧಾರೆ ನೋಡಿ ವೋಟ್ ಮಾಡಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More