ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದೇಕೆ? ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ
ಕರ್ನಾಟಕ ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಬಗ್ಗೆ ತಮ್ಮ ಅಧ್ಯಯನ ಮತ್ತು ಅವುಗಳಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸುವ ಬಗ್ಗೆ ಮಾತನಾಡಿದ್ದಾರೆ. ಈ ಘಟನೆಯು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು, ಆಗಸ್ಟ್ 22: ಕರ್ನಾಟಕ ವಿಧಾನಸಭೆಯಲ್ಲಿ ಗುರುವಾರ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಸಂಬಂಧ ಚರ್ಚೆ ನಡೆಯುತ್ತಿರುವಾಗ ಡಿಸಿಎಂ ಡಿಕೆ ಶಿವಕುಮಾರ್ ಆರ್ಎಸ್ಎಸ್ನ ‘ನಮಸ್ತೇ ಸದಾ ವತ್ಸಲೇ’ ಗೀತೆ ಹಾಡಿ ಗಮನ ಸೆಳೆದಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲೂ ಭಾರಿ ಚರ್ಚೆಯಾಗಿದೆ. ಇದೀಗ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಕಮ್ಯುನಿಸ್ಟ್ ಪಕ್ಷ, ಜನತಾ ದಳ ಮತ್ತು ಬಿಜೆಪಿ ಹಾಗೂ ಆರ್ಎಸ್ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ. ಪ್ರತಿಯೊಂದು ಪಕ್ಷದಲ್ಲೂ, ಸಂಘಟನೆಯಲ್ಲೂ ಒಳ್ಳೆಯ ಮತ್ತು ಕೆಟ್ಟ ಗುಣಗಳಿರುತ್ತವೆ ಎಂದು ಹೇಳಿದ್ದಾರೆ. ಒಳ್ಳೆಯದನ್ನು ಸ್ವೀಕರಿಸಬೇಕು ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

