6,6,6,6,6,6: ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್ವೆಲ್
WI vs AUS: ಜೋಶ್ ಇಂಗ್ಲಿಸ್ 51 ರನ್ ಬಾರಿಸಿದರೆ, ಕ್ಯಾಮರೋನ್ ಗ್ರೀನ್ 35 ಎಸೆತಗಳಲ್ಲಿ ಅಜೇಯ 55 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 19.2 ಓವರ್ಗಳಲ್ಲಿ 206 ರನ್ಗಳಿಸಿ 3 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ 4-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಟಿ20 ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ತಂಡದಲ್ಲಿ ಪ್ರಯೋಗ ನಡೆಯುತ್ತಿದೆ. ಈ ಪ್ರಯೋಗದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಲಾಗಿದೆ. ಹೀಗೆ ಆರಂಭಿಕನಾಗಿ ಅವಕಾಶ ಪಡೆದ ಮ್ಯಾಕ್ಸಿ ಪವರ್ಪ್ಲೇನಲ್ಲೇ ಅಬ್ಬರಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಸೇಂಟ್ ಕಿಟ್ಸ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ಗಳಲ್ಲಿ 205 ರನ್ ಕಲೆಹಾಕಿತು.
206 ರನ್ಗಳ ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಮಿಚೆಲ್ ಮಾರ್ಷ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಮ್ಯಾಕ್ಸ್ವೆಲ್ ಸಿಡಿಲಬ್ಬದದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಬಿಗ್ ಶಾಟ್ಗಳಿಗೆ ಯತ್ನಿಸಿದ ಮ್ಯಾಕ್ಸಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 18 ಎಸೆತಗಳಲ್ಲಿ 47 ರನ್ ಚಚ್ಚಿದರು. ಪರಿಣಾಮ ಪವರ್ಪ್ಲೇನಲ್ಲಿ ಆಸ್ಟ್ರೇಲಿಯಾ ತಂಡವು 66 ರನ್ಗಳಿಸಿತು.
ಆ ಬಳಿಕ ಬಂದ ಜೋಶ್ ಇಂಗ್ಲಿಸ್ 51 ರನ್ ಬಾರಿಸಿದರೆ, ಕ್ಯಾಮರೋನ್ ಗ್ರೀನ್ 35 ಎಸೆತಗಳಲ್ಲಿ ಅಜೇಯ 55 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 19.2 ಓವರ್ಗಳಲ್ಲಿ 206 ರನ್ಗಳಿಸಿ 3 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ 4-0 ಅಂತರದಿಂದ ಮುನ್ನಡೆ ಸಾಧಿಸಿದೆ.

