VIDEO: ಸುಈಈಈಈ… ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
AUS vs WI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 286 ರನ್ಗಳಿಸಿದರೆ, ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್ನಲ್ಲಿ 253 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 33 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.
ಗ್ರೆನೆಡಾದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಿಡಿದ ಕ್ಯಾಚ್ವೊಂದರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ಬೌಲಿಂಗ್ನೊಂದಿಗೆ ಕಮಿನ್ಸ್ ಡೈವಿಂಗ್ನೊಂದಿಗೆ ಕ್ಯಾಚ್ ಹಿಡಿದಿರುವುದು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 286 ರನ್ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ಪರ ಮೂರನೇ ಕ್ರಮಾಂಕದಲ್ಲಿ ಕೀಸಿ ಕಾರ್ಟಿ ಕಣಕ್ಕಿಳಿದಿದ್ದರು. ಪ್ಯಾಟ್ ಕಮಿನ್ಸ್ ಎಸೆದ ಈ ಇನಿಂಗ್ಸ್ನ 9ನೇ ಓವರ್ನ 2ನೇ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ್ದರು.
ಆದರೆ ಚೆಂಡು ಕೀಸಿ ಕಾರ್ಟಿ ಅವರ ಬ್ಯಾಟ್ನ ಅಂಚಿಗೆ ತಗುಲಿ ಗಾಳಿಗೆ ಚಿಮ್ಮಿದೆ. ಇತ್ತ ಕಡೆ ಬೌಲಿಂಗ್ ರನ್ನಿಂಗ್ನಲ್ಲಿದ್ದ ಪ್ಯಾಟ್ ಕಮಿನ್ಸ್ ಅದ್ಭುತವಾಗಿ ಡೈವ್ ಹೊಡೆದು ಒಂದೇ ಕೈಯಲ್ಲಿ ಚೆಂಡು ಹಿಡಿದರು. ಈ ಅತ್ಯುತ್ತಮ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಕಮಿನ್ಸ್ ಅವರ ಫೀಲ್ಡಿಂಗ್ ಪರಾಕ್ರಮಕ್ಕೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 286 ರನ್ಗಳಿಸಿದರೆ, ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್ನಲ್ಲಿ 253 ರನ್ಗಳಿಸಿ ಆಲೌಟ್ ಆಗಿದೆ. ಇದೀಗ 33 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
