VIDEO: ಸುಈಈಈಈ… ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್

Updated on: Jul 05, 2025 | 12:53 PM

AUS vs WI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 286 ರನ್​ಗಳಿಸಿದರೆ, ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್​ನಲ್ಲಿ 253 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 33 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.

ಗ್ರೆನೆಡಾದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಿಡಿದ ಕ್ಯಾಚ್​ವೊಂದರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ಬೌಲಿಂಗ್​ನೊಂದಿಗೆ ಕಮಿನ್ಸ್ ಡೈವಿಂಗ್​ನೊಂದಿಗೆ ಕ್ಯಾಚ್ ಹಿಡಿದಿರುವುದು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 286 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ಪರ ಮೂರನೇ ಕ್ರಮಾಂಕದಲ್ಲಿ ಕೀಸಿ ಕಾರ್ಟಿ ಕಣಕ್ಕಿಳಿದಿದ್ದರು. ಪ್ಯಾಟ್ ಕಮಿನ್ಸ್ ಎಸೆದ ಈ ಇನಿಂಗ್ಸ್​ನ 9ನೇ ಓವರ್​ನ 2ನೇ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ್ದರು.

ಆದರೆ ಚೆಂಡು ಕೀಸಿ ಕಾರ್ಟಿ ಅವರ ಬ್ಯಾಟ್​ನ ಅಂಚಿಗೆ ತಗುಲಿ ಗಾಳಿಗೆ ಚಿಮ್ಮಿದೆ. ಇತ್ತ ಕಡೆ ಬೌಲಿಂಗ್ ರನ್ನಿಂಗ್​ನಲ್ಲಿದ್ದ ಪ್ಯಾಟ್ ಕಮಿನ್ಸ್ ಅದ್ಭುತವಾಗಿ ಡೈವ್ ಹೊಡೆದು ಒಂದೇ ಕೈಯಲ್ಲಿ ಚೆಂಡು ಹಿಡಿದರು. ಈ ಅತ್ಯುತ್ತಮ ಕ್ಯಾಚ್​ ವಿಡಿಯೋ ವೈರಲ್ ಆಗಿದ್ದು, ಕಮಿನ್ಸ್ ಅವರ ಫೀಲ್ಡಿಂಗ್ ಪರಾಕ್ರಮಕ್ಕೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 286 ರನ್​ಗಳಿಸಿದರೆ, ವೆಸ್ಟ್ ಇಂಡೀಸ್ ತಂಡ ಪ್ರಥಮ ಇನಿಂಗ್ಸ್​ನಲ್ಲಿ 253 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 33 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More