WI vs PAK; ವಿಂಡೀಸ್ ವಿರುದ್ಧ ಸರಣಿ ಗೆದ್ದ ಪಾಕ್ ಪಡೆ
WI vs PAK: 190 ರನ್ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡಕ್ಕೆ ಅಲಿಕ್ ಅಥನಾಝ್ ಹಾಗೂ ಜ್ಯುವೆಲ್ ಆ್ಯಂಡ್ರೊ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 44 ರನ್ ಪೇರಿಸಿದ ಬಳಿಕ ಜ್ಯುವೆಲ್ ಆ್ಯಂಡ್ರೊ (24) ಔಟಾದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಅಥನಾಝ್ 40 ಎಸೆತಗಳಲ್ಲಿ 60 ರನ್ ಬಾರಿಸಿದರು.
ಫ್ಲೋರಿಡಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಪರ ಸೈಮ್ ಅಯ್ಯೂಬ್ (66) ಹಾಗೂ ಸಾಹಿಬ್ಝಾದ ಫರ್ಯಾನ್ (74) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 189 ರನ್ ಕಲೆಹಾಕಿತು.
190 ರನ್ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ತಂಡಕ್ಕೆ ಅಲಿಕ್ ಅಥನಾಝ್ ಹಾಗೂ ಜ್ಯುವೆಲ್ ಆ್ಯಂಡ್ರೊ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 44 ರನ್ ಪೇರಿಸಿದ ಬಳಿಕ ಜ್ಯುವೆಲ್ ಆ್ಯಂಡ್ರೊ (24) ಔಟಾದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಅಥನಾಝ್ 40 ಎಸೆತಗಳಲ್ಲಿ 60 ರನ್ ಬಾರಿಸಿದರು.
ಇನ್ನು ಶೆರ್ಫೇನ್ ರದರ್ಫೋರ್ಡ್ 35 ಎಸೆತಗಳಲ್ಲಿ 51 ರನ್ ಚಚ್ಚಿದರು. ಆದರೆ ಕೊನೆಯ ಹಂತದಲ್ಲಿ ಎಡವಿದ ವೆಸ್ಟ್ ಇಂಡೀಸ್ ತಂಡವು ಅಂತಿಮವಾಗಿ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಾಕಿಸ್ತಾನ್ ತಂಡವು 13 ರನ್ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

