ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ
ಧೈರ್ಯಶಾಲಿ ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಹೈ-ವೋಲ್ಟೇಜ್ ನಾಟಕ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪೊಲೀಸ್ ಅಧಿಕಾರಿಯನ್ನು ಪೊಲೀಸ್ ಕಾನ್‌ಸ್ಟೆಬಲ್ ರಾಹುಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಉಳಿಸಲು ಕಾನ್‌ಸ್ಟೆಬಲ್ ಮಾಡಿದ ಧೈರ್ಯ ಮತ್ತು ಪ್ರಯತ್ನಕ್ಕಾಗಿ ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಅವರನ್ನು ಶ್ಲಾಘಿಸುತ್ತಿದ್ದಾರೆ.
ಪ್ರಯಾಗ್‌ರಾಜ್, (ಮಾರ್ಚ್ 18): ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಿಳೆಯೊಬ್ಬರು ಹೈ-ವೋಲ್ಟೇಜ್ ವಿದ್ಯುತ್ ಟವರ್ ಮೇಲೆ ಹತ್ತಿದ ಆಘಾತಕಾರಿ ಘಟನೆ ನಡೆದಿದೆ. ಆ ಮಹಿಳೆ ವಿದ್ಯುತ್ ಟವರ್ ಮೇಲೆ ಹತ್ತಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ, ಧೈರ್ಯಶಾಲಿ ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos