ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

Edited By:

Updated on: Jun 15, 2026 | 8:50 PM

ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತ ಕೊಲೆ ನಡೆದಿದೆ. ಇಲ್ಲಿ ಎಫ್ಎಸ್ಎಲ್ ಅಧಿಕಾರಿಗಳೇ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು ತನಿಖೆಯಲ್ಲಿ ಬಯಲಾಗಿದೆ. ಹೌದು...ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿಯ ಮಾಜಿ ಸೈನಿಕ ಸಂದೀಪ್ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಸುಮಾ, ತನ್ನ ಪತಿ ಮಾಜಿ ಸೈನಿಕನಾಗಿದ್ದ ಸಂದೀಪ್​​​​ ಮಂಜರಗಿಯನ್ನ ಹತ್ಯೆಗೈದು ಬಳಿಕ ಆಡಿದ್ದ ನೌಟಂಕಿ ಆಟ ಬಟಾಬಯಲಾಗಿದೆ.

ಬೆಳಗಾವಿ, ಜೂನ್ 15): ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತ ಕೊಲೆ ನಡೆದಿದೆ. ಇಲ್ಲಿ ಎಫ್ಎಸ್ಎಲ್ ಅಧಿಕಾರಿಗಳೇ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು ತನಿಖೆಯಲ್ಲಿ ಬಯಲಾಗಿದೆ. ಹೌದು…ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿಯ ಮಾಜಿ ಸೈನಿಕ ( Ex Serviceman) ಸಂದೀಪ್ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಸುಮಾ, ತನ್ನ ಪತಿ ಮಾಜಿ ಸೈನಿಕನಾಗಿದ್ದ ಸಂದೀಪ್​​​​ ಮಂಜರಗಿಯನ್ನ ಹತ್ಯೆಗೈದು ಬಳಿಕ ಆಡಿದ್ದ ನೌಟಂಕಿ ಆಟ ಬಟಾಬಯಲಾಗಿದೆ. ಪ್ರಿಯಕರನ ತೆಕ್ಕೆಗಾಗಿ, 2 ಕೋಟಿ ರೂಪಾಯಿ ಇನ್ಶುರೆನ್ಸ್​​ ಹಣಕ್ಕಾಗಿ ಗಂಡನನ್ನೇ ಕೊಂದಿದ್ದ ಹಂತಕಿ ಇವಳು. ಪತಿ ಹತ್ಯೆಗಾಗಿ ಈಕೆ ಮಾಡಿದ್ದ ಮಸಲತ್ತು, ಕೊಲೆ ಸಾಕ್ಷ್ಯಗಳನ್ನ ಮುಚ್ಚಾಕಲು ಈಕೆ ಬಳಸಿದ್ದ ತಂತ್ರ ಕಂಡು ಪೊಲೀಸರು ಶಾಕ್ ಆಗಿದ್ದಾರೆ.. ಯಾಕಂದ್ರೆ, ಸಿನಿಮಾಗಳನ್ನೂ ಮೀರಿಸವಂತೆ ಸಂಚು ರೂಪಿಸಿದ್ದಾಳೆ.

2 ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ಪತಿಯನ್ನು ಪತ್ನಿಯೇ ಹತ್ಯೆ ಮಾಡಿದ ಮತ್ತು ಸಾಕ್ಷ್ಯ ನಾಶಪಡಿಸಿದ ಪ್ರಕರಣವನ್ನು ಜಿಲ್ಲೆಯ ಯಮಕನಮರಡಿ ಠಾಣೆ ಪೊಲೀಸರು ಭೇದಿಸಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಸೇರಿದಂತೆ ಒಟ್ಟು 9 ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ಹಣ ಪಡೆದು, ಎಫ್ಎಸ್ಎಲ್ ಪ್ರಯೋಗಾಲಯದ ಸಿಬ್ಬಂದಿ ಸಹಾಯದಿಂದ ಆರೋಪಿಗಳು ವರದಿಯನ್ನೇ ಬದಲಿಸಿರುವುದು ರಾಜ್ಯದಲ್ಲೇ ಮೊದಲ ಪ್ರಕರಣ .

Published on: Jun 15, 2026 08:47 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More