ಹಣಕಾಸಿನ ಸಹಾಯ ಮಾಡಿ; ಮಹಾರಾಷ್ಟ್ರ ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

Updated on: Apr 25, 2025 | 10:16 PM

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಸಂತೋಷ್ ಜಗದಾಳೆ ಅವರ ಪತ್ನಿ ಪ್ರಗತಿ ಜಗದಾಳೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ತಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ನಮ್ಮ ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಪತಿ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದರಿಂದ, ಸರ್ಕಾರಕ್ಕೆ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದೇವೆ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ನಮ್ಮ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪುಣೆ, ಏಪ್ರಿಲ್ 25: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಸಂತೋಷ್ ಜಗದಾಳೆ ಅವರ ಪತ್ನಿ ಪ್ರಗತಿ ಜಗದಾಳೆ ಮಹಾರಾಷ್ಟ್ರ ಸರ್ಕಾರಕ್ಕೆ (Maharashtra Government) ಮನವಿ ಮಾಡಿಕೊಂಡಿದ್ದು, ತಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ನಮ್ಮ ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಪತಿ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ್ದರಿಂದ, ಸರ್ಕಾರಕ್ಕೆ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದೇವೆ. ಇನ್ಮುಂದೆ ನನ್ನ ಜೀವನವನ್ನು ಹೇಗೆ ನಡೆಸುವುದು ಎಂದು ನನಗೆ ಚಿಂತೆಯಾಗಿದೆ. ಜೀವನ ನಿರ್ವಹಣೆ ಮಾಡುತ್ತಿದ್ದ ನನ್ನ ಪತಿ ಇನ್ನಿಲ್ಲ. ಆದ್ದರಿಂದ ನನಗೆ ಈಗ ಯಾವುದೇ ಆದಾಯದ ಮೂಲವಿಲ್ಲ. ನಾನು ಗೃಹಿಣಿ, ನನ್ನ ಮಗಳಿಗೂ ಕೆಲಸವಿಲ್ಲ. ಆದ್ದರಿಂದ ನಾನು ನನ್ನ ಮನೆಯನ್ನು ನಡೆಸಲು ಸರ್ಕಾರ ನನಗೆ ಕೆಲವು ವ್ಯವಸ್ಥೆಗಳನ್ನು ಮಾಡಬೇಕೆಂದು ಬಯಸುತ್ತೇನೆ. ಹಾಗೇ, ನನ್ನ ಮಗಳಿಗೆ ಕೆಲಸ ನೀಡಿ. ಸರ್ಕಾರ ನಮಗಾಗಿ ವ್ಯವಸ್ಥೆ ಮಾಡಬೇಕು. ನಾವು ಈ ಪರಿಸ್ಥಿತಿಗೆ ಬಂದಿರುವುದರಲ್ಲಿ ನಮ್ಮ ತಪ್ಪಿಲ್ಲದ ಕಾರಣದಿಂದ ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ನಮ್ಮ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More