ಕಾಡಾನೆ ದಾಳಿಗೆ ಇಬ್ಬರ ಬಲಿ: ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ

Edited By:

Updated on: Nov 16, 2026 | 4:41 PM

ಹಾಸನ ಜಿಲ್ಲೆಯಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಇದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನವೆಂಬರ್ 18ರ ರಾತ್ರಿ 12 ಗಂಟೆಯವರೆಗೆ ಬೇಲೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರ್ ಆದೇಶ ಹೊರಡಿಸಿದ್ದಾರೆ.

ಹಾಸನ, ನವೆಂಬರ್ 16: ಹಾಸನ ಜಿಲ್ಲೆಯಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹೌದು…ಶನಿವಾರ ಕಾಡಾನೆ ದಾಳಿಯಿಂದ ಚೌಡನಹಳ್ಳಿ ಗ್ರಾಮದ ಜಯಮ್ಮ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಕಾಡಾನೆ, ಹಫೀಜುರ್ ರೆಹಮಾನ್ ಎನ್ನುವರನ್ನು ಬಲಿ ಪಡೆದುಕೊಂಡಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ಹಫೀಜುರ್ ರೆಹಮಾನ್ ಎನ್ನುವರನ್ನು ಕಾಲಿನಿಂದ ತುಳಿದು ಸಾಯಿಸಿದೆ. ಹೀಗೆ ಕಾಡಾನೆ ದಾಳಿ ನಿರಂತರವಾಗುತ್ತಿರುವುದನ್ನು ಖಂಡಿಸಿ ಪ್ರತಿಭಟನೆಗಳು ನಡೆದಿದ್ದು, ಪೊಲೀಸರ ಜೊತೆ ವಾಗ್ದಾಗಳು ನಡೆದಿವೆ. ಇದರಿಂದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನವೆಂಬರ್ 18ರ ರಾತ್ರಿ 12 ಗಂಟೆಯವರೆಗೆ ಬೇಲೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರ್ ಆದೇಶ ಹೊರಡಿಸಿದ್ದಾರೆ. ಮದ್ಯ ಮಾರಾಟ ನಿಷೇಧಿಸಿರುವ ಬಗ್ಗೆ ತಹಶೀಲ್ದಾರ್ ಶ್ರೀಧರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More