ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

Edited By:

Updated on: Mar 30, 2026 | 10:38 AM

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ದೈತ್ಯ ಒಂಟಿಸಲಗ ‘ಪೆನ್ಸಿಲ್ ಕೋರೆ’ ಅಟ್ಟಹಾಸ ಮೆರೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಜಖಂಗೊಳಿಸಿರುವ ಕಾಡಾನೆ, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಟಾಕಿ ಸಿಡಿಸಿದ್ದಕ್ಕೆ ರೊಚ್ಚಿಗೆದ್ದ ಆನೆ ದಾಳಿ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಇಲ್ಲಿದೆ.

ಹಾಸನ, ಮಾರ್ಚ್ 30: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More