ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್

Edited By:

Updated on: Oct 07, 2026 | 9:28 AM

ಮೈಸೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಕಾರಿನ ಮೇಲೆ ಚಾಮರಾಜನಗರ ಗಡಿಭಾಗದ ಆಸನೂರು ಬಳಿ ಕಾಡಾನೆಯೊಂದು ದಾಳಿ ನಡೆಸಿದೆ. ಮೈಸೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಕಾರನ್ನು ತಡೆದ ಕಾಡಾನೆಯೊಂದು, ಆಹಾರದ ಆಸೆಗೆ ಏಕಾಏಕಿ ಕಾರಿನ ಮೇಲೆ ಕಾಲಿಟ್ಟು ಹುಡುಕಾಟ ನಡೆಸಿದೆ. ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟಿದ್ದರಿಂದ ಸೈಡ್ ಮಿರರ್ ಜಖಂಗೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ, ಅಕ್ಟೋಬರ್ 07: ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಚಾಮರಾಜನಗರ ಗಡಿಭಾಗ ತಮಿಳುನಾಡಿನ ಆಸನೂರು ಬಳಿ ಭೀಕರ ಘಟನೆಯೊಂದು ನಡೆದಿದೆ. ಮೈಸೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಕಾರನ್ನು ತಡೆದ ಕಾಡಾನೆಯೊಂದು, ಆಹಾರದ ಆಸೆಗೆ ಏಕಾಏಕಿ ಕಾರಿನ ಮೇಲೆ ಕಾಲಿಟ್ಟು ಹುಡುಕಾಟ ನಡೆಸಿದೆ.

ಆನೆ ಕಾರಿನ ಮೇಲೆ ಕಾಲಿಡುತ್ತಿದ್ದಂತೆಯೇ ಸೈಡ್ ಮಿರರ್ ಸಂಪೂರ್ಣ ಜಖಂಗೊಂಡಿದೆ. ದಿಢೀರ್ ನಡೆದ ಈ ಗಜರಾಜನ ರೌದ್ರಾವತಾರದಿಂದ ಕಾರಿನಲ್ಲಿದ್ದ ಪ್ರಯಾಣಿಕರು ಹಾಗೂ ಇತರ ವಾಹನ ಸವಾರರು ತೀವ್ರ ಆತಂಕದಿಂದ ಪತರಗುಟ್ಟಿದ್ದಾರೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅನಾಹುತವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 07, 2026 09:26 AM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More