ವಿರಾಜಪೇಟೆ: ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!

Edited By:

Updated on: Jan 30, 2026 | 11:32 AM

ಸಿದ್ದಾಪುರದ ಬಿಜಿಎಸ್ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಬಿಟ್ಟು ವಾಪಸ್ ಬರುತ್ತಿದ್ದಾಗ ಒಂಟಿ ಸಲಗ ಅಟ್ಟಾಡಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಘಟನೆಗೆ ಬಸ್ ಚಾಲಕನ ಪ್ರಚೋದನೆಯೂ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಆತನ ವಿರುದ್ಧವೂ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ.

ಮಡಿಕೇರಿ, ಜನವರಿ 30: ಶಾಲಾ ಮಕ್ಕಳನ್ನು ಬಿಟ್ಟು ವಾಪಸ್ ಬರುವಾಗ ಸ್ಕೂಲ್ ಬಸ್ಸೊಂದಕ್ಕೆ ಕಿರಿದಾದ ರಸ್ತೆಯಲ್ಲಿ ಕಾಡಾನೆ ಎದುರಾಗಿ ಆತಂಕದ ಸನ್ನಿವೇಶ ನಿರ್ಮಾಣವಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಬಳಿ ನಡೆದಿದೆ. ಒಂಟಿ ಸಲಗ ಎದುರು ಸಿಕ್ಕಾಗ ಚಾಲಕ ಬಸ್ಸನ್ನು ಹಿಂದಕ್ಕೆ ಚಲಾಯಿಸಿಕೊಂಡು ಬಂದಿದ್ದಾನೆ. ಆದರೆ, ಆ ಸಂದರ್ಭದಲ್ಲಿ ಆತ ಆನೆಯನ್ನು ಪ್ರಚೋದಿಸಿ ಮಗಳ ಬಳಿ ವಿಡಿಯೋ ಮಾಡಲು ಹೇಳಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 30, 2026 11:07 AM