AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ

ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 18, 2026 | 12:42 PM

Share

ಕಾಡು ಪ್ರಾಣಿಗಳ ಹಾವಳಿಗೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳ ರೈತರು ಹೈರಾಣಾಗುತ್ತಿದ್ದಾರೆ. ಕಾಡಾನೆಗಳ ಹಾವಳಿಯಂತೂ ಮಿತಿ ಮೀರಿದ್ದು, ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ಹೊಲಕ್ಕೆ ಲಗ್ಗೆಯಿಟ್ಟ ಒಂಟಿ ಸಲಗ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ನೆಲಸಮ ಮಾಡಿದೆ.

ಚಾಮರಾಜನಗರ, ಫೆಬ್ರವರಿ 18: ಗಡಿ ನಾಡು ಚಾಮರಾಜನಗರದಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದೆ. ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಒಂಟಿ ಸಲಗ ತಿಂದು ತೇಗಿದ್ದು, ತಡರಾತ್ರಿ 3 ಗಂಟೆಯವರೆಗೂ ಕಾಡಾನೆ ಓಡಿಸಲು ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ರೈತರು ಹರಸಾಹಸ ಪಟ್ಟಿದ್ದಾರೆ. ನಂಜಶೆಟ್ಟಿ ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ಹಾಳು ಮಾಡಿದೆ. ಒಂಟಿ ಸಲಗವನ್ನು ಓಡಿಸುವ ವೇಳೆ ಬಿದ್ದು ರೈತನ ಕಾಲಿಗೆ ಗಾಯ ಕೂಡ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More