AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಗಡಿ ಗ್ರಾಮದ ಬಳಿ ಒಂಟಿ ಕಾಡಾನೆ ಪ್ರತ್ಯಕ್ಷ!

ಕೋಲಾರದ ಗಡಿ ಗ್ರಾಮದ ಬಳಿ ಒಂಟಿ ಕಾಡಾನೆ ಪ್ರತ್ಯಕ್ಷ!

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 23, 2026 | 11:39 AM

Share

ಕೋಲಾರದ ಬಂಗಾರಪೇಟೆ ಸಮೀಪದ ಕಾಮಸಮುದ್ರ ಅರಣ್ಯ ಪ್ರದೇಶದಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷವಾಗಿದೆ. ದೋಣಿಮಡಗು ಹಾಗೂ ಬಲಮಂದೆ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಿದ್ದು, ರೈತರು ತಮ್ಮ ಜಮೀನುಗಳಿಗೆ ತೆರಳಲು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆ ಕಾಡಾನೆಯನ್ನು ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಹರಸಾಹಸ ಪಡುತ್ತಿದೆ.

ಕೋಲಾರ, ನವೆಂಬರ್ 23: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮಗಳ ಬಳಿ ಒಂಟಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಬಂಗಾರಪೇಟೆಯ ಕಾಮಸಮುದ್ರ ಅರಣ್ಯ ಪ್ರದೇಶದಲ್ಲಿ ಈ ಕಾಡಾನೆ ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಾದ ದೋಣಿಮಡಗು ಹಾಗೂ ಬಲಮಂದೆ ಜನರ ನೆಮ್ಮದಿಗೆ ಭಂಗ ತಂದಿದೆ. ಕಾಡಾನೆ ಗ್ರಾಮಗಳ ಸಮೀಪ ಬೀಡುಬಿಟ್ಟಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಕಾಮಸಮುದ್ರ ಅರಣ್ಯ ಪ್ರದೇಶದಲ್ಲಿ ಸುತ್ತಾಡುತ್ತಿರುವ ಈ ಆನೆ, ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಿನಿಂದ ನಾಡಿನತ್ತ ಬಂದಿದೆ. ಸದ್ಯ ಈ ಕಾಡಾನೆ ಇದೇ ಭಾಗದಲ್ಲಿಯೇ ಅಡ್ಡಾಡುತ್ತಿರುವುದು ಕಂಡುಬಂದಿದೆ. ಒಂಟಿ ಆನೆಯನ್ನು ಸುರಕ್ಷಿತವಾಗಿ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಹರಸಾಹಸ ಪಡುತ್ತಿದ್ದಾರೆ. ಆನೆಯನ್ನು ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದತ್ತ ಓಡಿಸಲು ಪ್ರಯತ್ನಗಳು ಚುರುಕಾಗಿ ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತಿರುವ ಅರಣ್ಯ ಇಲಾಖೆ, ರಾತ್ರಿ ವೇಳೆ ಕಾಡಂಚಿನ ಪ್ರದೇಶಗಳತ್ತ ತೆರಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕಾಮಸಮುದ್ರದಲ್ಲಿ ಕಾಣಿಸಿಕೊಂಡಿರುವ ಕಾಡಾನೆಯ ಉಪಟಳದಿಂದ ಜನರನ್ನು ರಕ್ಷಿಸಲು ಇಲಾಖೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More