ಕರ್ನಾಟಕ ಗಡಿಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!

Edited By:

Updated on: Apr 02, 2026 | 12:47 PM

ಚಾಮರಾಜನಗರ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಗಜರಾಜನ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಈ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಕಾಣಿಸಿಕೊಂಡಿದ್ದು, ಸ್ಥಳೀಯರು ಆಶ್ಚರ್ಯದಿಂದ ನೋಡಿದ್ದಾರೆ. ಈ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮರಾಜನಗರ, ಏಪ್ರಿಲ್​​ 02: ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಪಾಲಾರ್ ಚೆಕ್ ಪೋಸ್ಟ್ ಪ್ರದೇಶದಲ್ಲಿ ಆನೆಯೊಂದು ಸಂಚರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಡಿ ಪ್ರದೇಶಗಳಲ್ಲಿ ಇಂತಹ ವನ್ಯಜೀವಿಗಳ ಸಂಚಾರವು ಸಾಮಾನ್ಯವಾಗಿದ್ದರೂ, ಚೆಕ್ ಪೋಸ್ಟ್ ಬಳಿ ಆನೆಯ ಓಡಾಟವು ಜನರಲ್ಲಿ ಅಚ್ಚರಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More