ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು, ಸಂಚಾರ ಅಸ್ತವ್ಯಸ್ತ

Edited By:

Updated on: Sep 08, 2026 | 2:02 PM

ಚಾಮರಾಜನಗರದ ಅಸನೂರು ಬಳಿ ಕಬ್ಬು ತುಂಬಿದ ಲಾರಿಯನ್ನು ಕಾಡಾನೆಗಳ ಹಿಂಡು ತಡೆದಿದ್ದು, ಸಂಚಾರ ಅಸ್ತವ್ಯಸ್ತವಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಇದೇ ರೀತಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗಂಗಾವರ ಸೇರಿದಂತೆ ಹಲವೆಡೆ ಕಾಡಾನೆಗಳಿಂದ ಬೆಳೆ ನಾಶವಾಗಿದ್ದು, ಆನೆ-ಮಾನವ ಸಂಘರ್ಷ ತೀವ್ರಗೊಂಡಿದೆ.

ಚಾಮರಾಜನಗರ, ಸೆಪ್ಟೆಂಬರ್ 8: ಚಾಮರಾಜನಗರ ಜಿಲ್ಲೆ ಗಡಿಭಾಗದ ಅಸನೂರು ಬಳಿ ಕಬ್ಬು ತುಂಬಿದ ಲಾರಿಗೆ ಕಾಡಾನೆಗಳ ಹಿಂಡು ಅಡ್ಡಗಟ್ಟಿ ಸಂಚಾರಕ್ಕೆ ಅಡ್ಡಿಪಡಿಸಿದೆ. ಇದರಿಂದಾಗಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು, ಹಲವು ವಾಹನಗಳು ತುಂಬಾ ಹೊತ್ತು ನಿಂತಲ್ಲೇ ನಿಲ್ಲಬೇಕಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಶಬ್ದ ಮಾಡಿ ಆನೆಗಳನ್ನು ಕಾಡಿಗೆ ಓಡಿಸಿದ್ದಾರೆ.

ಇದೇ ರೀತಿ, ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಬೇಲೂರು ತಾಲೂಕಿನ ಗಂಗಾವರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದೆ. ಬೆಳ್ಳೊಟ್ಟೆ, ತೊಳಲು, ಅನುಘಟ್ಟ, ಕಣಗುಪ್ಪೆ ಸೇರಿದಂತೆ ತೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಬೆಳೆ ನಾಶದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಫಿ, ಭತ್ತ, ಅಡಿಕೆ, ಮೆಕ್ಕೆಜೋಳದಂತಹ ಬೆಳೆಗಳು ಆನೆಗಳ ದಾಳಿಯಿಂದ ಹಾಳಾಗುತ್ತಿವೆ. ಒಂಟಿ ಸಲಗಗಳ ಹಾವಳಿಯಿಂದಲೂ ಬೆಳೆ ನಾಶದ ಪ್ರಮಾಣ ಹೆಚ್ಚಿದೆ ಎಂದು ತಿಳಿದುಬಂದಿದೆ. ಓಡಿಸಲು ಬಂದ ಇಟಿಎಫ್ ಸಿಬ್ಬಂದಿಯನ್ನು ಒಂಟಿ ಸಲಗವೊಂದು ಘೀಳಿಡುತ್ತಾ ಬೆನ್ನಟ್ಟಿದ ಘಟನೆಯೂ ನಡೆಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More