AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ

ಪ್ರಶಾಂತ್​ ಬಿ.
| Edited By: |

Updated on:Feb 24, 2026 | 12:48 PM

Share

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗಿದ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ.

ರಾಮನಗರ, ಫೆಬ್ರವರಿ 24: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗಿದ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 24, 2026 12:47 PM
Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More