ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ

Edited By:

Updated on: Mar 03, 2026 | 3:19 PM

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​ ಹಿನ್ನೆಲೆ ಸ್ಥಳೀಯ ನಿವಾಸಿಗಳು ಆತಂಕಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ನಡೆದಿದೆ. ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆ, ಸ್ಥಳದಲ್ಲಿಯೇ ಅರಣ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಚಿಕ್ಕಮಗಳೂರು, ಮಾರ್ಚ್​ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್​​ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 03, 2026 03:18 PM
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More