ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ: ವಿಡಿಯೋ ನೋಡಿ
ಕಾಫಿನಾಡಿನಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದೆ. ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಬಸರವಳ್ಳಿ ಗ್ರಾಮದಲ್ಲಿ ನಿತ್ಯವೂ ಕಾಡಾನೆಗಳು ನಾಡಿಗೆ ಲಗ್ಗೆ ಇಡುತ್ತಿದ್ದು, ಪ್ರಮುಖ ರಸ್ತೆಯಲ್ಲೇ ರಾಜಾರೋಷವಾಗಿ ಸಂಚರಿಸುತ್ತಿವೆ. ಇದರಿಂದ ಜನರ ಓಡಾಟ ಕಷ್ಟವಾಗಿದೆ. ಕಾಡಾನೆಗಳ ಸೆರೆ ಸ್ಥಳಾಂತರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆಗಳ ಸಂಚಾರದ ವಿಡಿಯೋ ಇಲ್ಲಿದೆ ನೋಡಿ.
ಚಿಕ್ಕಮಗಳೂರು, ಆಗಸ್ಟ್ 7: ಚಿಕ್ಕಮಗಳೂರು ಹಾಗೂ ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕಾಡಾನೆಗಳ ಸಂಚಾರ ಅತಿಯಾಗಿದೆ. ಇದರಿಂದಾಗಿ ವಾಹನ ಸವಾರರು ಆತಂಕದಲ್ಲೇ ಸಂಚಾರ ಮಾಡುವಂತಾಗಿದೆ.ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ, ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಬಸರವಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಿನಬೆಳಗಾದರೆ ಕಾಣಿಸುತ್ತಿದೆ. ಈ ರಸ್ತೆಯಲ್ಲಿ ನಿತ್ಯವೂ ಪ್ರವಾಸಿಗರ ವಾಹನಗಳು ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಕಾಡಾನೆಗಳ ಓಡಾಟ ಆತಂಕ ಸೃಷ್ಟಿಸಿದೆ.
Published on: Aug 07, 2025 08:47 AM
Latest Videos

