Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls Results; ಸೋಲನ್ನು ಗೌರವಯುತವಾಗಿ ಸ್ವೀಕರಿಸುತ್ತೇವೆ, ಆತ್ಮಾವಲೋಕನ ಮಾಡಿಕೊಳ್ಳುವ ಸಮಯ: ಬಿಎಸ್ ಯಡಿಯೂರಪ್ಪ

Karnataka Assembly Polls Results; ಸೋಲನ್ನು ಗೌರವಯುತವಾಗಿ ಸ್ವೀಕರಿಸುತ್ತೇವೆ, ಆತ್ಮಾವಲೋಕನ ಮಾಡಿಕೊಳ್ಳುವ ಸಮಯ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: May 13, 2023 | 3:11 PM

ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗ್ಯೂ ಪಕ್ಷಕ್ಕೆ ಹಿನ್ನಡೆಯಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ಜನತೆ ನೀಡಿದ ತೀರ್ಪನ್ನು ಗೌರವಯುತ ಮತ್ತು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಬೆಂಗಳೂರಿನ ತಮ್ಮ ಕಾವೇರಿ ನಿವಾಸದ ಮುಂಭಾಗದಲ್ಲಿ ಸಿದ್ಧಪ್ರತಿಯನ್ನು ಮಾಧ್ಯಮದ ಕೆಮೆರಾಗಳ ಮುಂದೆ ಓದಿದ ಯಡಿಯೂರಪ್ಪನವರು ಸೋಲು ಗೆಲುವು ಬಿಜೆಪಿಗೆ ಹೊಸದೇನೂ ಅಲ್ಲ, ಕೇವಲ ಎರಡು ಸ್ಥಾನಗಳಿಂದ ಅರಂಭಿಸಿ ಸ್ವಂತ ಬಲದಲ್ಲಿ ಸರ್ಕಾರ ರಚಿಸುವಷ್ಟು ಪಕ್ಷ ಬೆಳೆದಿದೆ ಎಂದು ಹೇಳಿದರು, ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು (development works) ಮಾಡಿದಾಗ್ಯೂ ಪಕ್ಷಕ್ಕೆ ಹಿನ್ನಡೆಯಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ