ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು

Edited By:

Updated on: Jun 02, 2025 | 10:23 PM

ತಮಿಳು ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗುತ್ತೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ‘ಥಗ್ ಲೈಫ್’ ಸಿನಿಮಾವನ್ನು ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ.

ಕಾಲಿವುಡ್ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ (Thug Life) ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗುತ್ತೋ ಇಲ್ಲವೋ ಎಂಬ ಅನುಮಾನ ಮೂಡಿದೆ. ಕನ್ನಡದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಮಲ್ ಹಾಸನ್ (Kamal Haasan) ಅವರು ಕ್ಷಮೆ ಕೇಳದ ಹೊರತು ‘ಥಗ್ ಲೈಫ್’ ಬಿಡುಗಡೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಈ ಬಗ್ಗೆ ಸಾ.ರಾ. ಗೋವಿಂದು ಮಾತನಾಡಿದ್ದಾರೆ. ‘ಒಂದು ವೇಳೆ ಕಮಲ್ ಹಾಸನ್ ಅವರು ಕ್ಷಮೆ ಕೇಳಿದರೆ ಅದನ್ನು ಒಪ್ಪಿಕೊಳ್ಳುವುದು ನಮ್ಮ ಧರ್ಮ’ ಎಂದು ಸಾರಾ ಗೋವಿಂದು (Sa Ra Govindu) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.