AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಸಂಪುಟದಲ್ಲಿ ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು

ಡಿಕೆಶಿ ಸಂಪುಟದಲ್ಲಿ ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು

ಅನಿಲ್​ ಕಲ್ಕೆರೆ
| Edited By: |

Updated on: Nov 04, 2026 | 4:37 PM

Share

ಸಚಿವ ಸ್ಥಾನ ಸಿಗುವ ಭರವಸೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ನಾಗೇಂದ್ರ, ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ. ಸದ್ಯ ಬಳ್ಳಾರಿ, ರಾಯಚೂರು, ಕೊಪ್ಪಳ ಭಾಗದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳಿಗೆ ನೀರಿನ ಅಭಾವ ಉಂಟಾಗಿದ್ದು, ಮುಖ್ಯಮಂತ್ರಿಗಳು ಆಂಧ್ರ ಸಿಎಂ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​​ 04: ನಾನು ಮತ್ತೆ ಸಚಿವನಾಗುತ್ತೇನೆಂಬ ಭರವಸೆ ಇದೆ ಎಂದು  ಬಿ.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಅಧಿವೇಶನದ ಒಳಗೆ ಬಾಕಿ ಸ್ಥಾನ ತುಂಬ ಬಹುದು. ಅದೆಲ್ಲ ಸಿಎಂ ಹಾಗೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ.  ಆದರೆ ಮರಳಿ ತನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದ್ದು, ಆ ಕುರಿತು ಕೊನೆಯವರೆಗೂ ಪ್ರಾರ್ಥನೆ ಮತ್ತು ಪ್ರಯತ್ನವನ್ನು ಮಾಡುತ್ತೇನೆ ಎಂದವರು ತಿಳಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ಈ ಹಿಂದೆ ರಾಜೀನಾಮೆ ಸಲ್ಲಿಸಿದ್ದರು. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾದ ಬೆನ್ನಲ್ಲೇ ಹುದ್ದೆ ತೊರೆದಿದ್ದರು. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಮಳೆಗಾದ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿದ್ದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More