ಡಿಕೆಶಿ ಸಂಪುಟದಲ್ಲಿ ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಸಚಿವ ಸ್ಥಾನ ಸಿಗುವ ಭರವಸೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ನಾಗೇಂದ್ರ, ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ. ಸದ್ಯ ಬಳ್ಳಾರಿ, ರಾಯಚೂರು, ಕೊಪ್ಪಳ ಭಾಗದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳಿಗೆ ನೀರಿನ ಅಭಾವ ಉಂಟಾಗಿದ್ದು, ಮುಖ್ಯಮಂತ್ರಿಗಳು ಆಂಧ್ರ ಸಿಎಂ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 04: ನಾನು ಮತ್ತೆ ಸಚಿವನಾಗುತ್ತೇನೆಂಬ ಭರವಸೆ ಇದೆ ಎಂದು ಬಿ.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಅಧಿವೇಶನದ ಒಳಗೆ ಬಾಕಿ ಸ್ಥಾನ ತುಂಬ ಬಹುದು. ಅದೆಲ್ಲ ಸಿಎಂ ಹಾಗೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಮರಳಿ ತನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದ್ದು, ಆ ಕುರಿತು ಕೊನೆಯವರೆಗೂ ಪ್ರಾರ್ಥನೆ ಮತ್ತು ಪ್ರಯತ್ನವನ್ನು ಮಾಡುತ್ತೇನೆ ಎಂದವರು ತಿಳಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ಈ ಹಿಂದೆ ರಾಜೀನಾಮೆ ಸಲ್ಲಿಸಿದ್ದರು. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾದ ಬೆನ್ನಲ್ಲೇ ಹುದ್ದೆ ತೊರೆದಿದ್ದರು. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಳೆಗಾದ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿದ್ದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
