Karnataka Assembly Elections: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಾಳೆಯಿಂದ ಪ್ರಚಾರ ಮಾಡುವುದಾಗಿ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್

Karnataka Assembly Elections: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಾಳೆಯಿಂದ ಪ್ರಚಾರ ಮಾಡುವುದಾಗಿ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 18, 2023 | 10:33 AM

ಲಕ್ಷ್ಮಣ ಸವದಿಯವರು ಕಾಂಗ್ರೆಸ್ ಪಕ್ಷವನ್ನು ಸೇರಿರುವುದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಒದಗಿಸಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು

ಬೆಳಗಾವಿ: ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೊದಲು ಸುಳೇಭಾವಿಯಲ್ಲಿರುವ (Sulebhavi) ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಟಿವಿ9 ಕನ್ನಡ ವಾಹಿನಿಯ ಬೆಳಗಾವಿ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ಕ್ಷೇತ್ರದಲ್ಲಿ ಜಾತಿ, ಸಮುದಾಯ ಲೆಕ್ಕಕ್ಕೆ ಬರಲ್ಲ, ಕಳೆದ 5 ವರ್ಷಗಳಲ್ಲಿ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳಷ್ಟೇ ಗಣನೆಗೆ ಬರುತ್ತವೆ ಮತ್ತು ಅದೇ ಆಧಾರದ ಮೇಲೆ ಜನ ತಮಗೆ ವೋಟು ನೀಡುತ್ತಾರೆ ಎಂದು ಹೇಳಿದರು. ಲಕ್ಷ್ಮಣ ಸವದಿಯವರು (Laxman Savadi) ಕಾಂಗ್ರೆಸ್ ಪಕ್ಷವನ್ನು ಸೇರಿರುವುದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಒದಗಿಸಿದೆ ಎಂದ ಅವರು ನಾಳೆಯೇ ತಮ್ಮ ಬದ್ಧ ರಾಜಕೀಯ ವೈರಿ ರಮೇಶ್ ಜಾರಕಿಹೊಳಿ ಕ್ಷೇತ್ರ ಗೋಕಾಕ್ ನಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ