ಲೋಕಸಭಾ ಚುನಾವಣೆ; ವರಿಷ್ಠರು ಸೂಚಿಸುವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಡಿಕೆ ಸುರೇಶ್, ಸಂಸದ

ಲೋಕಸಭಾ ಚುನಾವಣೆ; ವರಿಷ್ಠರು ಸೂಚಿಸುವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಡಿಕೆ ಸುರೇಶ್, ಸಂಸದ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 23, 2023 | 1:20 PM

ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಜಕೀಯವಾಗಿ ಸದೆಬಡಿಯುವ ಹುನ್ನಾರ ಡಿಕೆ ಸಹೋದರರಿಗಿರುವುದು ಕನ್ನಡಿಗರಿಗೆ ಗೊತ್ತಿರದ ವಿಚಾರವೇನಲ್ಲ. ಹಾಗಾಗಿ, ಕುಮಾರಸ್ವಾಮಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸಿದರೆ ಅವರು ಎದುರಾಳಿ ನಿಸ್ಸಂದೇಹವಾಗಿ ಸುರೇಶ್ ಆಗಲಿದ್ದಾರೆ.

ಬೆಂಗಳೂರು: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡು, ಕಲಾಪದಿಂದ ಸಸ್ಪೆಂಡ್ ಆದ ಬಳಿಕ ದೆಹಲಿಯ ಜಂತರ್ ಮಂತರ್ ನಲ್ಲಿ (Jantar Mantar) ನಿರಶನ ನಡೆಸಿ ರಾಜ್ಯಕ್ಕೆ ವಾಪಸ್ಸಾಗಿರುವ ಸಂಸದ ಡಿಕೆ ಸುರೇಶ್ (DK Suresh) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ (Bengaluru North) ಸ್ಪರ್ಧಿಸುತ್ತೀರಾ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ, ಬೆಂಗಳೂರು ಉತ್ತರದಿಂದ ಸ್ಪರ್ಧಿಸುವಂತೆ ಹೇಳಿದರೆ ತನಗೆ ಆಸಕ್ತಿ ಇಲ್ಲದಿದ್ದರೂ ಖಂಡಿತ ಸ್ಪರ್ಧಿಸುವುದಾಗಿ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬೇಕಾದರೂ ಅದು ಕ್ಷೇತ್ರದ ಜನರ, ಕಾರ್ಯಕರ್ತರ ಮತ್ತು ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿರುತ್ತದೆ ಎಂದು ಸುರೇಶ್ ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರದರ್ಶನದಲ್ಲಿ ಸುಧಾರಣೆಯಾಗಲಿದೆಯಾ? ಕಳೆದ ಸಲ ಕೇವಲ ಒಂದು ಸ್ಥಾನ ಸಿಕ್ಕಿತ್ತು ಅಂತ ಕೇಳಿದರೆ ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಇಡೀ ದೇಶದಲ್ಲಿ ಇಂಡಿಯ ಒಕ್ಕೂಟ ಉತ್ತಮ ಪ್ರದರ್ಶನ ನೀಡಿ ಅಧಿಕಾರಕ್ಕೆ ಬರಲಿದೆ ಎಂದು ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ