2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ

Edited By:

Updated on: Sep 17, 2026 | 1:41 PM

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಪ್ರವಾಸ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸುವುದಾಗಿ ಘೋಷಿಸಿದ್ದಾರೆ. ಹಿನ್ನಡೆ-ಮುನ್ನಡೆ ಎಂಬುದು ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ ಎಂದು ನಿಖಿಲ್​​ ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಮನಗರ, ಸೆಪ್ಟೆಂಬರ್​​ 17: 2023ರ ಚುನಾವಣೆ ಸೋಲಿನ ಕಹಿ ಕಾರ್ಯಕರ್ತರಲ್ಲಿ ಇನ್ನೂ ಮಾಸಿಲ್ಲ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನ ಕಾಣಲು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ. ರಾಜ್ಯದಲ್ಲಿ 101 ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ ರಾಜ್ಯ ಪ್ರವಾಸ ಮಾಡುತ್ತೇನೆ, ರೈತರ ಸಮಸ್ಯೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 17, 2026 01:38 PM
Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More