Bengaluru-Mysuru Expressway; ದೆಹಲಿಗೆ ಹೋದಾಗ ಟೋಲ್ ಸಂಗ್ರಹ ಬೇಡ ಅಂತ ನಿತಿನ್ ಗಡ್ಕರಿಗೆ ಮನವಿ ಮಾಡುವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jul 29, 2023 | 4:32 PM

ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು,

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೀಕ್ಷಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂದೂರು ಗ್ರಾಮದ ಟೋಲ್ ಪ್ಲಾಜಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಟೋಲ್ ಸಂಗ್ರಹಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರೋದಿಲ್ಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನು ನೋಡಿಕೊಳ್ಳುತ್ತದೆ, ಹೆದ್ದಾರಿ ಕಾಮಗಾರಿಯಲ್ಲಿ ಇನ್ನೂ ಬಹಳಷ್ಟು ಕೆಲಸಗಳು ಉಳಿದುಕೊಂಡಿರುವುದರಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸ ಬೇಕೆಂದು ದೆಹಲಿಗೆ ಹೋದಾಗ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಜೊತೆ ಮಾತಾಡುವುದಾಗಿ ಮುಖ್ಯಮಂತ್ರಿ ಹೇಳಿದರು. ಸಿದ್ದರಾಮಯ್ಯ ಅವರಿಂದ ಅನುಮತಿ ಪಡೆದು ಮಾತು ಮುಂದುವರೆಸಿದ ಚಲುವರಾಯಸ್ವಾಮಿ, ಹಿಂದಿನ ಬಿಜೆಪಿ ಸರ್ಕಾರ ಎಕ್ಸ್ ಪ್ರೆಸ್ ವೇಯನ್ನು ನಿರ್ಲಕ್ಷಿಸಿದ ಕಾರಣ ಕಾಂಗ್ರೆಸ್ ಸರ್ಕಾರ ದೋಷಗಳನ್ನು ಸರಿ ಮಾಡಬೇಕಾಗಿ ಬಂದಿದೆ. ಏನೆಲ್ಲ ಕೆಲಸಗಳು ಆಗಬೇಕಿದೆ ಎಂಬ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ, ಹೆಚ್ಚುವರಿ 151 ಕೋಟಿ ರೂ. ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ, ಆದಷ್ಟು ಬೇಗ ಹೆದ್ದಾರಿಯಲ್ಲಿನ ಎಲ್ಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.