ಸಿದ್ದರಾಮಯ್ಯ ಸೂಚನೆ ಮೇರೆಗೆ ವಕ್ಫ್​ ಅದಾಲತ್ ಮಾಡಿದ್ದೇನೆ: ಜಮೀರ್ ಸ್ಪಷ್ಟನೆ

| Updated By: ರಮೇಶ್ ಬಿ. ಜವಳಗೇರಾ

Updated on: Oct 31, 2024 | 11:27 PM

ಕರ್ನಾಟಕದಲ್ಲಿ ವಕ್ಫ್ ಬೋರ್ಡ್‌ನಿಂದ ಭೂ ಕಬಳಿಕೆ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ನಮ್ಮ ಜಮೀನಿಗೂ ಕುತ್ತು ಬರುತ್ತಾ ಎಂದು ರೈತರು ಆತಂಕಗೊಂಡಿದ್ದಾರೆ. ಭೂಮಿ ಕೈ ತಪ್ಪಿಹೋಗುತ್ತೆಂಬ ಭಯದಿಂದ ಗಲಾಟೆಗಳೂ ಆಗುತ್ತಿವೆ. ಇನ್ನು ಈ ಬಗ್ಗೆ ವಕ್ಫ್​ ಬೋರ್ಡ್​ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಅದಾಲತ್ ಮಾಡಿದ್ದೇನೆ ಎಂದಿದ್ದಾರೆ.

ಬೆಂಗಳೂರು, (ಅಕ್ಟೋಬರ್ 31): ಕರ್ನಾಟಕದಲ್ಲಿ ವಕ್ಫ್ ಬೋರ್ಡ್‌ನಿಂದ ಭೂ ಕಬಳಿಕೆ ಆರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದ್ದು, ಇದಕ್ಕೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿ ಸಹ ಸಾಥ್ ನೀಡಿದ್ದು, ವಕ್ಫ್​ ಬೋರ್ಡ್​ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಮುಗಿಬಿದ್ದಿದೆ. ಅಲ್ಲದೇ ವಕ್ಫ್​ ಅದಾಲತ್ ಮಾಡಿದ್ದಕ್ಕೆ ಈ ರೀತಿ ಸಮಸ್ಯೆಯಾಗಿದೆ. ಹೀಗಾಗಿ ಅದಾಲತ್ ಕೈಬಿಡುವಂತೆ ಬಿಜೆಪಿ ಆಗ್ರಹಿಸಿದೆ. ಇನ್ನು ಇದೀಗ ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯನವರನತ್ತ ಬೊಟ್ಟು ಮಾಡಿದ್ದಾರೆ. ಸಿದ್ದರಾಮಯ್ಯನವರ ಆದೇಶದ ಮೇರೆಗೆ ಎಲ್ಲಾ ಕಡೆ ವಕ್ಫ್​ ಅದಾಲತ್ ಮಾಡಿದ್ದಾನೆ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ವಕ್ಫ್​ ಆಸ್ತಿ ಒತ್ತುವರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ಮುಂದೆ ಹೇಳಿದ್ದೆ. ಆಗ ಅವರು ಸರಿ ಎಲ್ಲೆಲ್ಲಿ ಒತ್ತುವರಿಯಾಗಿದೆ ಅಲ್ಲಿ ಅದಾಲತ್ ಮಾಡುವಂತೆ ಆದೇಶ ಮಾಡಿದ್ದರು. ಅದರಂತೆ ನಾನು ಮಾಡಿದ್ದೇನೆ ಎಂದು ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ. ಜಮೀರ್ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.